ಕದನ ವಿರಾಮದ ಯಾವುದೇ ಒಪ್ಪಂದ ನಡೆದಿಲ್ಲ: ಇರಾನ್ ವಿದೇಶಾಂಗ ಸಚಿವರ ಸ್ಪಷ್ಟನೆ

ಟೆಹರಾನ್: ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಕುರಿತ ಯಾವುದೇ ಒಪ್ಪಂದ ನಡೆದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿನ ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, "ಇಸ್ರೇಲ್ ಆಡಳಿತವು ಇರಾನ್ ಜನರ ವಿರುದ್ಧ ತನ್ನ ಕಾನೂನುಬಾಹಿರ ಆಕ್ರಮಣವನ್ನು ಟೆಹ್ರಾನ್ ನ ಸ್ಥಳೀಯ ಸಮಯ ಬೆಳಿಗ್ಗೆ 4 ಗಂಟೆಯೊಳಗೆ ನಿಲ್ಲಿಸಿದರೆ, ನಮ್ಮ ಪ್ರತಿಕ್ರಿಯೆಯನ್ನು ಮುಂದುವರಿಸುವ ಉದ್ದೇಶ ನಮಗಿಲ್ಲ" ಎಂದು ತಿಳಿಸಿದ್ದಾರೆ.
"ಆ ಬಳಿಕವಷ್ಟೇ ನಮ್ಮ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಯ ಕುರಿತು ಅಂತಿಮ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು", ಎಂದು ಅವರು ಇಸ್ರೇಲ್ ಗೆ ಪರೋಕ್ಷ ಸಂದೇಶ ನೀಡಿದ್ದಾರೆ.
Next Story





