ಅಬುಧಾಬಿ| ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಒಬ್ಬ ಮೃತ್ಯು

ಸಾಂದರ್ಭಿಕ ಚಿತ್ರ (PTI)
ಅಬುಧಾಬಿ : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದಿದ್ದು ಅಬುಧಾಬಿಯಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಬುಧಾಬಿ ಮಾಧ್ಯಮ ಕಚೇರಿಯನ್ನು ಉಲ್ಲೇಖಿಸಿ Aljazeera ವರದಿ ಮಾಡಿದೆ.
ಅಬುಧಾಬಿ ಬಾನಿ ಯಾಸ್ ಪ್ರದೇಶದಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿ ಪಾಕಿಸ್ತಾನದ ನಾಗರಿಕರಾಗಿದ್ದಾರೆ ಎಂದು ವರದಿಯಾಗಿದೆ.
ಸೌದಿ ಅರೇಬಿಯಾದ ಮೇಲೂ ಡ್ರೋನ್ ದಾಳಿ ನಡೆದಿದೆ. ಎರಡು ಡ್ರೋನ್ಗಳನ್ನು ಹೊಡೆದುರುಳಿಸಿರುವ ಬಗ್ಗೆ ಸೌದಿ ಅರೇಬಿಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.
Next Story




