Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಝಾದ ಎಲ್ಲ ಗಡಿದಾಟು ಮಾರ್ಗಗಳನ್ನು...

ಗಾಝಾದ ಎಲ್ಲ ಗಡಿದಾಟು ಮಾರ್ಗಗಳನ್ನು ತೆರೆಯಿರಿ; ಇನ್ನು ನೆಪ ಬೇಡ: ವಿಶ್ವಸಂಸ್ಥೆ

1.06 ಲಕ್ಷ ಜನರಿಗೆ ಮಳೆಯಿಂದ ಸಂಕಷ್ಟ

ವಾರ್ತಾಭಾರತಿವಾರ್ತಾಭಾರತಿ12 Nov 2026 7:30 AM IST
share
ಗಾಝಾದ ಎಲ್ಲ ಗಡಿದಾಟು ಮಾರ್ಗಗಳನ್ನು ತೆರೆಯಿರಿ; ಇನ್ನು ನೆಪ ಬೇಡ: ವಿಶ್ವಸಂಸ್ಥೆ

ನ್ಯೂಯಾರ್ಕ್: ಗಾಝಾಕ್ಕೆ ಮಾನವೀಯ ನೆರವು ತಲುಪಿಸಲು ಇನ್ನು ವಿಳಂಬ ಮಾಡುವುದು ಬೇಡ. ಒಂದೆರಡು ಗಡಿದಾಟು ಮಾರ್ಗಗಳನ್ನಲ್ಲ, ಎಲ್ಲ ಮಾರ್ಗಗಳನ್ನೂ ತೆರೆಯಿರಿ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಅಧೀನ ಪ್ರಧಾನ ಕಾರ್ಯದರ್ಶಿ ಟಾಮ್ ಫ್ಲೆಚರ್ ಇಸ್ರೇಲ್‌ ಗೆ ಆಗ್ರಹಿಸಿದ್ದಾರೆ ಎಂದು Aljazeera ವರದಿ ಮಾಡಿದೆ.

ಗಾಝಾಕ್ಕೆ ನೆರವು ಪೂರೈಸಲು ಬೆಂಬಲ ಸೂಚಿಸಿರುವ ಕೆಲವು ದೇಶಗಳು, ಚಳಿಗಾಲಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ತಲುಪಿಸಲು ಇಸ್ರೇಲ್‌ ನಲ್ಲಿ ಹೊಸ ಸರ್ಕಾರ ರಚನೆಯಾಗುವವರೆಗೆ ಕಾಯಬೇಕಾಗುತ್ತದೆ ಎಂದು ಹೇಳುತ್ತಿವೆ. ಈ ನಿಲುವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಫ್ಲೆಚರ್, ಸರ್ಕಾರ ರಚನೆಯ ನೆಪದಲ್ಲಿ ನೆರವು ಪೂರೈಕೆಯನ್ನು ವಿಳಂಬಿಸುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ವಿದೇಶಾಂಗ ಸಚಿವರು ನೆರವು ಕಾರ್ಯಾಚರಣೆಗಳಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಇಸ್ರೇಲ್‌ ನಲ್ಲಿ ಚುನಾವಣೆ ಬಳಿಕ ಪ್ರಗತಿ ಸಾಧಿಸುವುದು ಕಷ್ಟವಾಗಲಿದೆ ಎಂದು ಅವರು ಪದೇ ಪದೇ ಹೇಳುತ್ತಿದ್ದರು. ಈಗ ಹೊಸ ಸರ್ಕಾರ ರಚನೆಯಾಗುವವರೆಗೆ ಕಾಯುವಂತೆ ಸೂಚಿಸುತ್ತಿದ್ದಾರೆ ಎಂದು ಫ್ಲೆಚರ್ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಂತರರಾಷ್ಟ್ರೀಯ ಕಾನೂನನ್ನು ಉಲ್ಲೇಖಿಸಿರುವ ಅವರು, ನೆರವು ವಿತರಣೆಯಲ್ಲಿ ವಿಳಂಬ ಮಾಡುವುದು, ಅಡೆತಡೆಗಳನ್ನು ಸೃಷ್ಟಿಸುವುದು ಮತ್ತು ಹಣಕಾಸು ನೆರವು ಕಡಿತಗೊಳಿಸುವುದಕ್ಕೆ ಇಂತಹ ನೆಪಗಳನ್ನು ಒಪ್ಪಲಾಗದು ಎಂದು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಗಾಝಾದಲ್ಲಿ ಸುರಿದ ಭಾರಿ ಮಳೆಯಿಂದ 1.06 ಲಕ್ಷ ಜನರು ನೇರವಾಗಿ ತೊಂದರೆಗೊಳಗಾಗಿದ್ದಾರೆ ಎಂದು ಯುನಿಸೆಫ್ ತಿಳಿಸಿದೆ. ಸ್ಥಳಾಂತರಗೊಂಡ ಫೆಲೆಸ್ತೀನಿಯನ್ನರು ಆಶ್ರಯ ಪಡೆದಿರುವ ಸಾವಿರಾರು ಡೇರೆಗಳು ಮಳೆನೀರಿನಲ್ಲಿ ಮುಳುಗಿವೆ. ನಿರಾಶ್ರಿತರ ಶಿಬಿರಗಳಲ್ಲಿನ ಶೌಚಾಲಯಗಳು ಕೂಡ ನೀರಿನಿಂದ ತುಂಬಿ ತುಳುಕುತ್ತಿವೆ.

ಸೂಕ್ತ ಆಶ್ರಯ ವ್ಯವಸ್ಥೆ ಇದ್ದಿದ್ದರೆ, ಜನರು ಇಂತಹ ಹವಾಮಾನ ಪರಿಸ್ಥಿತಿಯಿಂದ ಅನಗತ್ಯ ಅಪಾಯ ಎದುರಿಸಬೇಕಿರಲಿಲ್ಲ. ಉತ್ತಮ ಗುಣಮಟ್ಟದ ಡೇರೆಗಳು ಮತ್ತು ಚಳಿಗಾಲಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ಪೂರೈಸಲು ಅವಕಾಶ ನೀಡಿದ್ದರೆ ಈ ಸಂಕಷ್ಟವನ್ನು ತಪ್ಪಿಸಬಹುದಿತ್ತು ಎಂದು ಫ್ಲೆಚರ್ ಹೇಳಿದ್ದಾರೆ.

'ಇನ್ನು ವಿಳಂಬ ಬೇಡ. ಒಂದೆರಡು ಗಡಿದಾಟು ಮಾರ್ಗಗಳನ್ನಲ್ಲ, ಎಲ್ಲ ಮಾರ್ಗಗಳನ್ನೂ ತೆರೆಯಿರಿ. ನಮ್ಮ ಪ್ರಮುಖ ಸರ್ಕಾರೇತರ ಸಂಸ್ಥೆಗಳ ಪಾಲುದಾರರಿಗೆ ಕೆಲಸ ಮಾಡಲು ಅವಕಾಶ ನೀಡಿ. ವಾಣಿಜ್ಯ ಮಾರುಕಟ್ಟೆಗಳು ಕಾರ್ಯನಿರ್ವಹಿಸಲು ಬಿಡಿ. ಈ ಸಾಮೂಹಿಕ ಶಿಕ್ಷೆಯನ್ನು ನಿಲ್ಲಿಸಿ. ನೆರವು ಯೋಜನೆಗಳಿಗೆ ಹಣಕಾಸು ಒದಗಿಸಿ' ಎಂದು ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X