Pakistan | ಅವಳಿ ಬಾಂಬ್ ಸ್ಫೋಟ; ಕನಿಷ್ಠ 7 ಮೃತ್ಯು

ಸಾಂದರ್ಭಿಕ ಚಿತ್ರ
ಪೇಷಾವರ, ಜೂ.20: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬನ್ನೂ ಜಿಲ್ಲೆಯಲ್ಲಿ ಸಂಭವಿಸಿದ ಅವಳಿ ರಸ್ತೆಬದಿ ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಟ್ರಕ್ ಅನ್ನು ಗುರಿಯಾಗಿಸಿ ದೂರನಿಯಂತ್ರಿತ ಸಾಧನದ ಮೂಲಕ ಸ್ಫೋಟ ನಡೆಸಲಾಗಿದೆ. ಗಾಯಾಳುಗಳನ್ನು ತುರ್ತು ಚಿಕಿತ್ಸೆಗಾಗಿ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಎರಡನೇ ಸ್ಫೋಟ ಸಂಭವಿಸಿದೆ. ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ ಎಂದು ಬನ್ನೂ ಜಿಲ್ಲೆಯ ಪೊಲೀಸ್ ಅಧಿಕಾರಿ ಯಾಸಿರ್ ಅಫ್ರಿದಿ ತಿಳಿಸಿದ್ದಾರೆ.
ಸ್ಫೋಟಗಳ ಹೊಣೆಯನ್ನು ಯಾವುದೇ ಸಂಘಟನೆ ತಕ್ಷಣವೇ ಹೊತ್ತುಕೊಂಡಿಲ್ಲ. ತೆಹ್ರೀಕೆ ತಾಲಿಬಾನ್ ಪಾಕಿಸ್ತಾನ್ (TTP) ಮತ್ತು ಇತರ ಉಗ್ರಗಾಮಿ ಸಂಘಟನೆಗಳು ಈ ಪ್ರದೇಶದಲ್ಲಿ ಸಕ್ರಿಯವಾಗಿವೆ.
Next Story




