ಪಾಕಿಸ್ತಾನ: ಕಟ್ಟಡ ಕುಸಿದು ಕನಿಷ್ಠ 5 ಮಂದಿ ಮೃತ್ಯು

PC | freepik (ಸಾಂದರ್ಭಿಕ ಚಿತ್ರ)
ಕರಾಚಿ: ಪಾಕಿಸ್ತಾನದ ಬಂದರು ನಗರ ಕರಾಚಿಯಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು ಇತರ 6 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.
ಕಟ್ಟಡದಲ್ಲಿ ಸುಮಾರು 100 ಮಂದಿ ವಾಸಿಸುತ್ತಿದ್ದರು. ಇದುವರೆಗೆ ಐದು ಮೃತದೇಹಗಳನ್ನು ಗುರುತಿಸಲಾಗಿದ್ದು 6 ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಸಿದು ಬಿದ್ದ ಕಟ್ಟಡದ ಅವಶೇಷಗಳಡಿ ಕನಿಷ್ಠ 10 ಮಂದಿ ಸಿಲುಕಿರುವ ಮಾಹಿತಿಯಿದ್ದು ಸಾವು-ನೋವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ತಂಡವನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Next Story





