ಪಾಕಿಸ್ತಾನ | ಬಲೂಚಿಸ್ತಾನದಲ್ಲಿ ಪೊಲೀಸ್ ಠಾಣೆ ವಶಪಡಿಸಿಕೊಂಡ ಬಿಎಲ್ಎ: ಇಬ್ಬರು ಭದ್ರತಾ ಸಿಬ್ಬಂದಿ ಮೃತ್ಯು

ಸಾಂದರ್ಭಿಕ ಚಿತ್ರ (TOI)
ಕ್ವೆಟಾ: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತದಲ್ಲಿ ಬಲೂಚ್ ಲಿಬರೇಶನ್ ಆರ್ಮಿಯ (ಬಿಎಲ್ಎ) ಸಶಸ್ತ್ರ ಹೋರಾಟಗಾರರು ಭದ್ರತಾ ಸಿಬ್ಬಂದಿಯೊಂದಿಗೆ ತೀವ್ರ ಚಕಮಕಿ ನಡೆಸಿ ಪೊಲೀಸ್ ಠಾಣೆಯೊಂದನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ದಾಳಿಯಲ್ಲಿ ಕನಿಷ್ಠ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
ಪಿಶಿನ್ ಜಿಲ್ಲೆಯ ಬೋಸ್ತಾನ್ ಪೊಲೀಸ್ ಠಾಣೆಯ ಮೇಲೆ ನಿಯಂತ್ರಣವನ್ನು ಸಾಧಿಸುವ ಮೊದಲು ಬಿಎಲ್ಎ ಹೋರಾಟಗಾರರು ಪೊಲೀಸ್ ಸಿಬ್ಬಂದಿಯೊಂದಿಗೆ ಗುಂಡಿನ ಚಕಮಕಿ ನಡೆಸಿದ್ದಾರೆ. ದಾಳಿಕೋರರು ಠಾಣೆಯಲ್ಲಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ನಂತರ ಕಟ್ಟಡ ಮತ್ತು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.
Next Story




