ಇರಾನ್ ಮೇಲಿನ ಅಮೆರಿಕದ ದಾಳಿಯನ್ನು ಖಂಡಿಸಿದ ಪಾಕಿಸ್ತಾನ
► ಒಂದು ದಿನದ ಹಿಂದಷ್ಟೇ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡುವುದಾಗಿ ಹೇಳಿದ್ದ ಪಾಕ್!

PC | REUTERS
ಇಸ್ಲಾಮಾಬಾದ್: ಇರಾನ್ನ ಮೂರು ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದ ಅಮೆರಿಕದ ನಡೆಯನ್ನು ಪಾಕಿಸ್ತಾನವು ಖಂಡಿಸಿದೆ.
ಒಂದು ದಿನದ ಹಿಂದಷ್ಟೇ ಪಾಕಿಸ್ತಾನವು ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡುವುದಾಗಿ ಹೇಳಿತ್ತು.
ಇರಾನ್ ಪರಮಾಣು ಸೌಲಭ್ಯಗಳ ಮೇಲೆ ಬಾಂಬ್ ದಾಳಿ ಮಾಡಿದ ಟ್ರಂಪ್ ಅವರ ನಿರ್ಧಾರವು ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದೆ. ಇರಾನ್ ಬಿಕ್ಕಟ್ಟನ್ನು ಪರಿಹರಿಸಲು ರಾಜತಾಂತ್ರಿಕತೆಯೇ ಏಕೈಕ ಮಾರ್ಗವಾಗಿದೆ ಎಂದು ಪಾಕಿಸ್ತಾನವು ರವಿವಾರ ಹೇಳಿದೆ.
"ಇರಾನ್ ವಿರುದ್ಧ ನಡೆಯುತ್ತಿರುವ ಆಕ್ರಮಣದಿಂದಾಗಿ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಹಿಂಸಾಚಾರದ ಉಲ್ಬಣವು ತೀವ್ರವಾಗಿ ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ" ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಅವರು ರವಿವಾರ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರಿಗೆ ದೂರವಾಣಿ ಕರೆ ಮಾಡಿ ಅಮೆರಿಕದ ದಾಳಿಯನ್ನು ಖಂಡಿಸಿದರು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ತನ್ನ ಹೇಳಿಕೆಯಲ್ಲಿ ತಿಳಿಸಿದೆ.





