ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿಗೆ 17 ವರ್ಷ ಜೈಲು ಶಿಕ್ಷೆ

Photo : PTI
ಇಸ್ಲಮಾಬಾದ್: ತೋಷಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ, ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್(ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಷ್ರಾ ಬೀಬಿಗೆ ವಿಶೇಷ ನ್ಯಾಯಾಲಯ 17 ವರ್ಷ ಜೈಲು ಶಿಕ್ಷೆ ವಿಧಿಸಿರುವುದಾಗಿ ವರದಿಯಾಗಿದೆ.
2023ರ ಆಗಸ್ಟ್ ನಿಂದ ಜೈಲಿನಲ್ಲಿರುವ ಖಾನ್ ವಿರುದ್ಧ ಹಲವು ಪ್ರಕರಣ ದಾಖಲಾಗಿದೆ. ಇಮ್ರಾನ್ ಹಾಗೂ ಅವರ ಪತ್ನಿಗೆ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 409ರಡಿ(ನಂಬಿಕೆಯ ಉಲ್ಲಂಘನೆ) ತಲಾ 10 ವರ್ಷ ಕಠಿಣ ಜೈಲುಶಿಕ್ಷೆ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ 7 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ ಎಂದು ವಿಶೇಷ ನ್ಯಾಯಾಲಯದ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.
Next Story





