ಒಪ್ಪಂದಗಳನ್ನು ಗೌರವಿಸುವಂತೆ ಎಸ್ಸಿಒ ರಾಷ್ಟ್ರಗಳಿಗೆ ಪಾಕ್ ಪ್ರಧಾನಿ ಆಗ್ರಹ

ಪಾಕ್ ಪ್ರಧಾನಿ ಶಹಬಾಝ್ ಷರೀಫ್|PC : PTI
ಟಿಯಾನ್ಜಿನ್, ಸೆ.1: ನದಿ ನೀರು ಹಂಚಿಕೆ ಒಪ್ಪಂದ ಸೇರಿದಂತೆ ದ್ವಿಪಕ್ಷೀಯ ಒಪ್ಪಂದಗಳನ್ನು ಗೌರವಿಸುವಂತೆ ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಶಾಂಘೈ ಸಹಕಾರ ಸಂಸ್ಥೆ(ಎಸ್ಸಿಒ)ಯ ಸದಸ್ಯರಿಗೆ ಕರೆ ನೀಡಿದ್ದಾರೆ.
ಚೀನಾದ ಟಿಯಾನ್ ಜಿನ್ ನಲ್ಲಿ ನಡೆಯುತ್ತಿರುವ ಎಸ್ಸಿಒ ಶೃಂಗಸಭೆಯಲ್ಲಿ ಮಾತನಾಡಿದ ಷರೀಫ್ ` ಎಸ್ಸಿಒ ಸದಸ್ಯ ರಾಷ್ಟ್ರಗಳು ಎಲ್ಲಾ ದ್ವಿಪಕ್ಷೀಯ ಒಪ್ಪಂದಗಳನ್ನು, ಎಸ್ಸಿಒ ಸದಸ್ಯರೊಳಗೆ ಅಸ್ತಿತ್ವದಲ್ಲಿರುವ ಒಪ್ಪಂದಗಳಿಗೆ ಅನುಗುಣವಾಗಿ ನೀರಿನ ಪಾಲನ್ನು ತಡೆರಹಿತ ಬಳಸುವುದನ್ನು ಗೌರವಿಸುತ್ತವೆ ಎಂದು ನಾವು ನಿರೀಕ್ಷಿಸುತ್ತೇವೆ' ಎಂದು ಹೇಳಿದ್ದಾರೆ.
ಎಪ್ರಿಲ್ 22ರಂದು ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಭಾರತ ಅಮಾನತಿನಲ್ಲಿರಿಸಿದೆ.
Next Story





