ಸರ್ಕಾರಿ ಸ್ವಾಮ್ಯದ ಉದ್ಯಮಗಳ ಖಾಸಗೀಕರಣ : ಪಾಕಿಸ್ತಾನ ಪ್ರಧಾನಿ ಶಹಬಾಝ್ ಷರೀಫ್ ಘೋಷಣೆ
ಶೆಹಬಾಝ್ ಷರೀಫ್ (Photo credit : NDTV)
ಇಸ್ಲಾಮಾಬಾದ್: ವ್ಯೂಹಾತ್ಮಕವಾಗಿ ಮುಖ್ಯವಾಗಿರುವ ಸಂಸ್ಥೆಗಳನ್ನು ಹೊರತುಪಡಿಸಿ ಇತರ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಲಾಗುವುದು ಎಂದು ಪಾಕಿಸ್ತಾನ ಪ್ರಧಾನಿ ಶಹಬಾಝ್ ಷರೀಫ್ ಮಂಗಳವಾರ ಘೋಷಿಸಿದ್ದಾರೆ.
ಇಸ್ಲಾಮಾಬಾದ್ನಲ್ಲಿ ಮಂಗಳವಾರ ಖಾಸಗೀಕರಣ ಸಚಿವಾಲಯ ಹಾಗೂ ಖಾಸಗೀಕರಣ ಆಯೋಗಕ್ಕೆ ಸಂಬಂಧಿಸಿದ ಸಭೆಯಲ್ಲಿ ಈ ನಿರ್ಧಾರವನ್ನು ಪ್ರಧಾನಿ ಘೋಷಿಸಿದ್ದಾರೆ ಎಂದು ಎಆರ್ವೈ ನ್ಯೂಸ್ ವರದಿ ಮಾಡಿದೆ.
ಸಭೆಯಲ್ಲಿ ವಿದ್ಯುತ್ ವಿತರಣೆ ಸಂಸ್ಥೆಗಳ ಖಾಸಗೀಕರಣ ಸೇರಿದಂತೆ 2024-29ರ ಖಾಸಗೀಕರಣ ಯೋಜನೆಯ ಮಾರ್ಗಸೂಚಿಯನ್ನು ಪ್ರಸ್ತುತಪಡಿಸಲಾಯಿತು. ನಷ್ಟದಲ್ಲಿರುವ ಸರಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಆದ್ಯತೆಯ ಮೇರೆಗೆ ಖಾಸಗೀಕರಣಗೊಳಿಸಲಾಗುವುದು. ಖಾಸಗೀಕರಣ ಪ್ರಕ್ರಿಯೆಗೆ ವೇಗನೀಡಲು ತಜ್ಞರ ಸಮಿತಿಯನ್ನು ರಚಿಸಲಾಗುವುದು. 24 ಸರಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಲು ಖಾಸಗೀಕರಣಕ್ಕೆ ಸಂಬಂಧಿಸಿದ ಸಂಪುಟ ಸಮಿತಿ ಶಿಫಾರಸು ಮಾಡಿದೆ ಎಂದು ವರದಿ ಹೇಳಿದೆ.
Next Story