ಅಫ್ಘಾನಿಸ್ತಾನದ ಮೇಲೆ ಪಾಕ್ನಿಂದ ವಾಯುದಾಳಿ | 9 ಮಕ್ಕಳು ಸೇರಿದಂತೆ 10 ಮಂದಿ ಮೃತ್ಯು : ವರದಿ

Photo | AP
ಕಾಬೂಲ್ : ಅಫ್ಘಾನಿಸ್ತಾನದ ಖೋಸ್ಟ್ ಪ್ರದೇಶದಲ್ಲಿ ನಾಗರಿಕರ ಮನೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ತಡರಾತ್ರಿ ನಡೆಸಿದ ವಾಯುದಾಳಿಯಲ್ಲಿ 9 ಮಕ್ಕಳು ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ತಿಳಿಸಿದೆ.
ಖೋಸ್ಟ್ನ ಗುರ್ಬುಜ್ ಜಿಲ್ಲೆಯ ಮುಘಲ್ಗೈ ಪ್ರದೇಶದಲ್ಲಿ ಪಾಕಿಸ್ತಾನದ ಪಡೆಗಳು ನಿನ್ನೆ ರಾತ್ರಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆಸಿವೆ. ದಾಳಿಯಲ್ಲಿ 9 ಮಕ್ಕಳು ಮತ್ತು ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಕುನಾರ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿಯೂ ಪಾಕಿಸ್ತಾನದ ಪಡೆಗಳು ದಾಳಿ ನಡೆಸಿದೆ. ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನದ ತಾಲಿಬಾನ್ ಸರಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ.
"ನಿನ್ನೆ ರಾತ್ರಿ ಸುಮಾರು 12 ಗಂಟೆಯ ಸುಮಾರಿಗೆ ಪಾಕಿಸ್ತಾನದ ಆಕ್ರಮಣಕಾರಿ ಪಡೆಗಳು ಖೋಸ್ಟ್ ಪ್ರಾಂತ್ಯದ ಗೆರ್ಬಾಜ್ ಜಿಲ್ಲೆಯ ಮುಘಲ್ಗೈ ಪ್ರದೇಶದಲ್ಲಿ ಖಾಜಿ ಮಿರ್ ಅವರ ಪುತ್ರ ವಿಲಾಯತ್ ಖಾನ್ ಅವರ ನಿವಾಸಿದ ಮೇಲೆ ಬಾಂಬ್ ದಾಳಿ ನಡೆಸಿದೆ. ಈ ವೇಳೆ 9 ಮಕ್ಕಳು ಮತ್ತು ಒಬ್ಬ ಮಹಿಳೆ ಮೃತಪಟ್ಟಿದ್ದಾರೆ ಮತ್ತು ಮನೆ ಧ್ವಂಸಗೊಂಡಿದೆ" ಎಂದು ಜಬಿಹುಲ್ಲಾ ಮುಜಾಹಿದ್ ಎಕ್ಸ್ನಲ್ಲಿನ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.





