ಖೈಬರ್ ಪಖ್ತುಂಖ್ವದಲ್ಲಿ ಗುಂಡಿನ ದಾಳಿ: ಪೊಲೀಸ್ ಸಿಬ್ಬಂದಿ ಮೃತ್ಯು

ಸಾಂದರ್ಭಿಕ ಚಿತ್ರ | Photo Credit : magnific
ಪೇಷಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ತಹ್ರೀಕೆ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಗುಂಪಿನ ಶಂಕಿತ ಭಯೋತ್ಪಾದಕರ ಗುಂಪು ಪೋಲಿಸ್ ತಂಡದ ಮೇಲೆ ದಾಳಿ ನಡೆಸಿದ್ದು, ಒಬ್ಬ ಪೋಲಿಸ್ ಸಿಬ್ಬಂದಿ ಮೃತಪಟ್ಟಿದ್ದಾರೆ ಮತ್ತು ಠಾಣಾಧಿಕಾರಿ ಹಾಗೂ ಮಹಿಳಾ ಕಾನ್ಸ್ಟೇಬಲ್ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
ಡೇರಾ ಇಸ್ಮಾಯಿಲ್ ಖಾನ್ನ ಟ್ಯಾಂಕ್ ರಸ್ತೆಯಲ್ಲಿರುವ ಅಮೀನ್ ಫಾರ್ಮ್ ಹೌಸ್ ಬಳಿ ಪೊಲೀಸ್ ಬೆಂಗಾವಲು ಪಡೆಯನ್ನು ಬಂದೂಕುಧಾರಿಗಳು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ವರದಿಯಾಗಿದೆ.
Next Story




