ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ : ಮೃತರ ಸಂಖ್ಯೆ 51ಕ್ಕೆ ಏರಿಕೆ

Photo Credit : NDTV
ಜಕಾರ್ತ, ಆ.16: ಪೂರ್ವ ಇಂಡೋನೇಷ್ಯಾದಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪದಿಂದಾಗಿ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿಕೆಯಾಗಿದ್ದು ಸುಮಾರು 5,000 ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ರವಿವಾರ ತಿಳಿಸಿದ್ದಾರೆ.
ಪೂರ್ವ ನುಸಾ ತೆಂಗಾರ ಪ್ರಾಂತ್ಯದಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೂಕಂಪದಲ್ಲಿ 36 ಜನರು ಗಂಭೀರವಾಗಿ ಗಾಯಗೊಂಡಿದ್ದು, 77 ಜನರು ಸಣ್ಣಪುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ಉಪ ಆರೋಗ್ಯ ಸಚಿವ ಬೆಂಜಮಿನ್ ಪೌಲಸ್ ಆಕ್ಟೇವಿಯಾನಸ್ ತಿಳಿಸಿದ್ದಾರೆ.
Next Story




