ರಶ್ಯ | ಕಾರಿನಲ್ಲಿ ಸ್ಫೋಟ: ಸೇನಾಧಿಕಾರಿ ಮೃತ್ಯು

ಸಾಂದರ್ಭಿಕ ಚಿತ್ರ
ಮಾಸ್ಕೊ, ಗುರುವಾರ ಸೈಂಟ್ ಪೀಟರ್ಸ್ಬರ್ಗ್ನಲ್ಲಿ ರಶ್ಯದ ಸೇನಾಧಿಕಾರಿ ಮತ್ತು ಅವರ ಪತ್ನಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು ಸೇನಾಧಿಕಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪತ್ನಿ ಗಂಭೀರ ಗಾಯಗೊಂಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಸೈಂಟ್ ಪೀಟರ್ಸ್ಬರ್ಗ್ನ ಪುಷ್ಕಿಂಸ್ಕಿ ಜಿಲ್ಲೆಯ ಸುಷಾರಿ ನಗರದ ಸೂಪರ್ಮಾರ್ಕೆಟ್ ಬಳಿ ಬೆಳಿಗ್ಗೆ ಸುಮಾರು 10 ಗಂಟೆಗೆ ಸ್ಫೋಟ ಸಂಭವಿಸಿದೆ. ಕಾರಿನ ಒಳಗೆ ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ(ಐಇಡಿ)ವನ್ನು ರಿಮೋಟ್ ಕಂಟ್ರೋಲ್ ಮೂಲಕ ಸ್ಫೋಟಿಸಲಾಗಿದೆ. ಸ್ಫೋಟದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮಿಲಿಟರಿ ಮೂಲಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ.
Next Story




