ರಷ್ಯಾ ದಾಳಿಗೆ ಉಕ್ರೇನ್ ರಾಜಧಾನಿ ಕೀವ್ನಲ್ಲಿನ ಆಡಳಿತ ಕಟ್ಟಡಕ್ಕೆ ಹಾನಿ

Photo credit: X/@ZelenskyyUa
ಕೀವ್ : ಉಕ್ರೇನ್ನ ರಾಜಧಾನಿ ಕೀವ್ನಲ್ಲಿ ಸರಕಾರಿ ಆಡಳಿತ ಕಟ್ಟಡ ಸೇರಿದಂತೆ ಹಲವು ಕಟ್ಟಡವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ರಷ್ಯಾದ ತೈಲ ಪೈಪ್ಲೈನ್ ಗುರಿಯಾಗಿಸಿಕೊಂಡು ಉಕ್ರೇನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ರಷ್ಯಾದ ದಾಳಿಯಿಂದಾಗಿ ಕೀವ್ನ ಪೆಚೆರ್ಸ್ಕಿ ಜಿಲ್ಲೆಯ ಸರಕಾರಿ ಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಉಕ್ರೇನ್ ರಾಜಧಾನಿ ಕೀವ್ನ ಮಿಲಿಟರಿ ಮುಖ್ಯಸ್ಥ ತೈಮೂರ್ ಟ್ಕಾಚೆಂಕೊ ತಿಳಿಸಿದ್ದಾರೆ.
ಉಕ್ರೇನ್ ಸರಕಾರಿ ಕಟ್ಟಡದ ಮೇಲ್ಬಾಗದಿಂದ ದಟ್ಟ ಹೊಗೆ ಹೊರ ಬರುತ್ತಿರುವುದನ್ನು ಪ್ರತ್ಯಕ್ಷದರ್ಶಿಗಳು ನೋಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
ಉಕ್ರೇನ್ನ ರಾಜಧಾನಿ ಕೀವ್ ಮೇಲೆ ರಷ್ಯಾ ರಾತ್ರಿಯಿಡೀ ನಡೆಸಿದ ದಾಳಿಯಲ್ಲಿ ಶಿಶು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಮತ್ತು ಇತರ 18 ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ನ ಅಧಿಕಾರಿಗಳು ತಿಳಿಸಿದ್ದಾರೆ.
“ಕೀವ್ ನ ಸರಕಾರಿ ಕಚೇರಿ ಸೇರಿದಂತೆ ಹಲವಾರು ಕಟ್ಟಡಗಳನ್ನು ಗುರಿಯಾಗಿಸಿಕೊಂಡು ರಷ್ಯಾ ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ದಾಳಿ ನಡೆಸಿದೆ” ಎಂದು ಕೀವ್ ಮೇಯರ್ ವಿಟಾಲಿ ಕ್ಲಿಟ್ಸ್ಕೊ ಹೇಳಿದರು.
ರಷ್ಯಾ, ಉದ್ದೇಶಪೂರ್ವಕವಾಗಿ ಮತ್ತು ಪ್ರಜ್ಞಾಪೂರ್ವಕವಾಗಿ ನಾಗರಿಕರ ನೆಲೆಗಳ ಮೇಲೆ ದಾಳಿ ಮಾಡುತ್ತಿದೆ ಎಂದು ಟ್ಕಾಚೆಂಕೊ ಹೇಳಿದ್ದಾರೆ. ಉಕ್ರೇನ್ನ ಕ್ರೆಮೆನ್ಚುಕ್ನಲ್ಲಿ ಸರಣಿ ಸ್ಫೋಟಗಳು ಸಂಭವಿಸಿದೆ. ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿದೆ ಎಂದು ಮೇಯರ್ ವಿಟಾಲಿ ತಿಳಿಸಿದ್ದಾರೆ.







