ಸೌದಿ ಅರೇಬಿಯಾ | ಬೆಂಕಿ ಅವಘಡದಲ್ಲಿ 16 ಬಾಂಗ್ಲಾದೇಶಿ ಕಾರ್ಮಿಕರು ಮೃತ್ಯು

Photo Credit : NDTV
ರಿಯಾದ್, ಆ.10: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿರುವ ಸೋಫಾ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಬಾಂಗ್ಲಾದೇಶದ 16 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಸೌದಿ ಅರೇಬಿಯಾದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಮೃತರ ಗುರುತು ಪತ್ತೆ ಹಚ್ಚಲು ಹಾಗೂ ಅವರ ಪಾರ್ಥಿವ ಶರೀರಗಳನ್ನು ಸ್ವದೇಶಕ್ಕೆ ತರಲು ಪ್ರಯತ್ನಗಳನ್ನು ಆರಂಭಿಸಲಾಗಿದೆ. ರಿಯಾದ್ನ ಮುಸಾ ಸನಾಯಿಯಾ ಕೈಗಾರಿಕಾ ಪ್ರದೇಶದಲ್ಲಿ ರವಿವಾರ ಈ ಬೆಂಕಿ ಅವಘಡ ಸಂಭವಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಬಾಂಗ್ಲಾದೇಶದ ವಿದೇಶಾಂಗ ಇಲಾಖೆ ಮಾಹಿತಿ ನೀಡಿವೆ.
Next Story




