ಸಿರಿಯಾ | ಕಾರು ಬಾಂಬ್ ಸ್ಫೋಟ; 3 ಪೊಲೀಸರ ಸಹಿತ 4 ಮಂದಿ ಮೃತ್ಯು

ಸಾಂದರ್ಭಿಕ ಚಿತ್ರ
ದಮಾಸ್ಕಸ್: ಪೂರ್ವ ಸಿರಿಯಾದಲ್ಲಿ ಪೊಲೀಸ್ ಸ್ಟೇಷನ್ ಬಳಿ ರವಿವಾರ ಸಂಭವಿಸಿದ ಕಾರು ಬಾಂಬ್ ಸ್ಫೋಟದಲ್ಲಿ ಮೂವರು ಪೊಲೀಸರ ಸಹಿತ ನಾಲ್ಕು ಮಂದಿ ಸಾವನ್ನಪ್ಪಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಪೂರ್ವ ಸಿರಿಯಾದ ಅಲ್-ಮಯಾದೀನ್ ನಗರದಲ್ಲಿನ ಪೊಲೀಸ್ ಠಾಣೆಯ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದು ಇತರ ಇಬ್ಬರು ಗಾಯಗೊಂಡಿದ್ದಾರೆ. ಓರ್ವ ನಾಗರಿಕ ಕೂಡಾ ಮೃತಪಟ್ಟಿದ್ದಾನೆ ಎಂದು ಸರ್ಕಾರಿ ಸ್ವಾಮ್ಯದ ಸನಾ ಸುದ್ದಿಸಂಸ್ಥೆ ವರದಿ ಮಾಡಿದೆ.
ಪ್ರಾಥಮಿಕ ತನಿಖೆಯಲ್ಲಿ ಕಾರು ಬಾಂಬ್ ಸ್ಫೋಟ ದುರಂತಕ್ಕೆ ಕಾರಣವೆಂದು ತಿಳಿದು ಬಂದಿದೆ. ಯಾವುದೇ ಸಂಘಟನೆ ಸ್ಫೋಟದ ಹೊಣೆ ವಹಿಸಿಲ್ಲ. ನಗರದಲ್ಲಿ ಕಫ್ರ್ಯೂ ಜಾರಿಗೊಳಿಸಲಾಗಿದೆ ಎಂದು ಭದ್ರತಾ ಅಧಿಕಾರಿಗಳು ಹೇಳಿದ್ದಾರೆ.
Next Story