Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೆತನ್ಯಾಹು ಮತ್ತೆ ಪ್ರಧಾನಿಯಾಗಲು ಟ್ರಂಪ್...

ನೆತನ್ಯಾಹು ಮತ್ತೆ ಪ್ರಧಾನಿಯಾಗಲು ಟ್ರಂಪ್ ಬೆಂಬಲ; ಬೇರೊಬ್ಬರನ್ನು ಆಯ್ಕೆ ಮಾಡದಂತೆ ಇಸ್ರೇಲ್‌ಗೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ19 Oct 2026 7:27 AM IST
share
ನೆತನ್ಯಾಹು ಮತ್ತೆ ಪ್ರಧಾನಿಯಾಗಲು ಟ್ರಂಪ್ ಬೆಂಬಲ; ಬೇರೊಬ್ಬರನ್ನು ಆಯ್ಕೆ ಮಾಡದಂತೆ ಇಸ್ರೇಲ್‌ಗೆ ಎಚ್ಚರಿಕೆ

ವಾಷಿಂಗ್ಟನ್, ಅ. 19: ಇಸ್ರೇಲ್‌ ನಲ್ಲಿ ಅಕ್ಟೋಬರ್ 27ರಂದು ನಡೆಯಲಿರುವ ಸಂಸತ್ತಿನ ಚುನಾವಣೆಯಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ನೆತನ್ಯಾಹು ಬದಲು ಬೇರೊಬ್ಬರನ್ನು ನಾಯಕನನ್ನಾಗಿ ಆಯ್ಕೆ ಮಾಡಿದರೆ, ಇರಾನ್ ವಿರುದ್ಧದ ಹೋರಾಟದ ಹೊಣೆಯನ್ನು ಅಮೆರಿಕವೇ ಹೊರಬೇಕಾಗಬಹುದು ಎಂದು ಎಚ್ಚರಿಸಿದ್ದಾರೆ.

‘ಟ್ರೂತ್ ಸೋಷಿಯಲ್’ನಲ್ಲಿ ರವಿವಾರ ಇಸ್ರೇಲ್ ಜನರನ್ನು ಉದ್ದೇಶಿಸಿ ಸಂದೇಶ ಪ್ರಕಟಿಸಿರುವ ಟ್ರಂಪ್, ನೆತನ್ಯಾಹು ಅವರನ್ನು ‘ಧೈರ್ಯಶಾಲಿ ಪ್ರಧಾನಿ’ ಎಂದು ಹೇಳಿದ್ದಾರೆ. ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯಲ್ಲಿ ಅಮೆರಿಕದೊಂದಿಗೆ ಕೈಜೋಡಿಸಿದ್ದಕ್ಕಾಗಿ ಅವರನ್ನು ಶ್ಲಾಘಿಸಿದ್ದಾರೆ.

‘ಇಸ್ರೇಲ್ ಪ್ರಧಾನಿಯಾಗಿ ಮರು ಆಯ್ಕೆಯಾಗುವ ಸ್ಪರ್ಧೆಯಲ್ಲಿ ಬೀಬಿ ನೆತನ್ಯಾಹು ಅವರಿಗೆ ನನ್ನ ಸಂಪೂರ್ಣ ಬೆಂಬಲವಿದೆ’ ಎಂದು ಟ್ರಂಪ್ ಹೇಳಿದ್ದಾರೆ. ಕಠಿಣ ಸಂದರ್ಭಗಳಲ್ಲೂ ನೆತನ್ಯಾಹು ಕುಗ್ಗದೆ ಇನ್ನಷ್ಟು ಬಲಿಷ್ಠರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನೆತನ್ಯಾಹು ಬದಲು ಬೇರೊಬ್ಬರನ್ನು ಆಯ್ಕೆ ಮಾಡಿದರೆ ಇರಾನ್ ವಿರುದ್ಧದ ಕಾರ್ಯಾಚರಣೆಯನ್ನು ಅಮೆರಿಕವೇ ಮುಂದುವರಿಸಬೇಕಾಗಬಹುದು ಎಂದು ಟ್ರಂಪ್ ಹೇಳಿದ್ದಾರೆ. ಇರಾನ್ ತನ್ನ ನಿಲುವನ್ನು ಶೀಘ್ರ ಬದಲಿಸದಿದ್ದರೆ ಅಮೆರಿಕ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಿದೆ ಎಂದೂ ಎಚ್ಚರಿಸಿದ್ದಾರೆ.

ಟ್ರಂಪ್‌ ಗೆ ನೆತನ್ಯಾಹು ಧನ್ಯವಾದ

ಟ್ರಂಪ್ ಅವರ ಬೆಂಬಲಕ್ಕೆ ಪ್ರತಿಕ್ರಿಯಿಸಿರುವ ನೆತನ್ಯಾಹು, ಅಮೆರಿಕ ಅಧ್ಯಕ್ಷರನ್ನು ಶ್ವೇತಭವನದಲ್ಲಿ ಇಸ್ರೇಲ್‌ನ ಅತ್ಯುತ್ತಮ ಸ್ನೇಹಿತ ಎಂದು ಬಣ್ಣಿಸಿದ್ದಾರೆ.

‘ಅಧ್ಯಕ್ಷ ಟ್ರಂಪ್, ನನ್ನ ಸ್ನೇಹಿತ ಡೊನಾಲ್ಡ್, ನಿಮ್ಮ ಅಸಾಧಾರಣ ಬೆಂಬಲಕ್ಕೆ ಧನ್ಯವಾದಗಳು. ಇರಾನ್ ಆಡಳಿತ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯಲು ನಾವು ಎಂದಿಗೂ ಅವಕಾಶ ನೀಡುವುದಿಲ್ಲ’ ಎಂದು ಅವರು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಇರಾನ್ ವಿರುದ್ಧದ ಹೋರಾಟದಲ್ಲಿ ಅಮೆರಿಕ ನೀಡುತ್ತಿರುವ ಬೆಂಬಲವನ್ನೂ ಶ್ಲಾಘಿಸಿದ್ದಾರೆ.

ಟ್ರಂಪ್ ಅವರ ಬಹಿರಂಗ ಬೆಂಬಲದಿಂದ ನೆತನ್ಯಾಹು ಅಥವಾ ಅವರ ಬಲಪಂಥೀಯ ಲಿಕುಡ್ ಪಕ್ಷಕ್ಕೆ ಚುನಾವಣೆಯಲ್ಲಿ ಲಾಭವಾಗುವುದು ಖಚಿತವಲ್ಲ. ಇರಾನ್ ವಿಚಾರದಲ್ಲಿ ಇಸ್ರೇಲ್ ಮತ್ತು ಅಮೆರಿಕದ ನಡುವಿನ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಇಸ್ರೇಲ್‌ ನಲ್ಲಿ ಟ್ರಂಪ್‌ ಗೆ ಇರುವ ಸಾರ್ವಜನಿಕ ಬೆಂಬಲ ಕುಸಿದಿದೆ ಎಂದು ವರದಿ ತಿಳಿಸಿದೆ.

ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆಯುವ ಸಾಧ್ಯತೆ ಇಲ್ಲ ಎಂದು ಅಭಿಪ್ರಾಯ ಸಂಗ್ರಹಗಳು ಸೂಚಿಸಿವೆ. ಇಸ್ರೇಲ್‌ ನಲ್ಲಿ ಪ್ರಧಾನಿಯನ್ನು ನೇರ ಜನಪ್ರಿಯ ಮತದಾನದ ಮೂಲಕ ಆಯ್ಕೆ ಮಾಡುವುದಿಲ್ಲ. ಸಂಸತ್ತಿನಲ್ಲಿ ಪಕ್ಷಗಳು ಮೈತ್ರಿ ಮಾಡಿಕೊಂಡು ಸರಕಾರ ರಚಿಸುತ್ತವೆ.

2023ರ ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯ ಬಳಿಕ ನಡೆಯುತ್ತಿರುವ ಇಸ್ರೇಲ್‌ ನ ಮೊದಲ ರಾಷ್ಟ್ರೀಯ ಚುನಾವಣೆ ಇದಾಗಿದೆ. ಆ ದಾಳಿಯ ಬಳಿಕ ಇಸ್ರೇಲ್ ಗಾಝಾ, ಲೆಬನಾನ್ ಮತ್ತು ಇರಾನ್‌ ನಲ್ಲಿ ಯುದ್ಧ ನಡೆಸಿದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ನೆತನ್ಯಾಹು ಅಧಿಕಾರ ಉಳಿಸಿಕೊಳ್ಳುತ್ತಾರೆಯೇ ಅಥವಾ ಪ್ರತಿಸ್ಪರ್ಧಿಗಳಿಗೆ ಅವಕಾಶ ಮಾಡಿಕೊಡುತ್ತಾರೆಯೇ ಎಂಬುದನ್ನು ಚುನಾವಣೆ ನಿರ್ಧರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X