ಕೆನಡಾದ ಮೇಲಿನ ಸುಂಕ 35%ಕ್ಕೆ ಹೆಚ್ಚಿಸಿದ ಟ್ರಂಪ್

ಡೊನಾಲ್ಡ್ ಟ್ರಂಪ್ | PC : PTI
ವಾಷಿಂಗ್ಟನ್, ಆ.1: ಕೆನಡಾದಿಂದ ಆಮದಾಗುವ ಸರಕುಗಳ ಮೇಲಿನ ಸುಂಕವನ್ನು 35%ಕ್ಕೆ ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಘೋಷಿಸಿದ್ದಾರೆ.
25% ಇದ್ದ ಸುಂಕವನ್ನು 35%ಕ್ಕೆ ಹೆಚ್ಚಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೆನಡಾ ಪ್ರಧಾನಿ ಮಾರ್ಕ್ ಕಾರ್ನೆ ಕೆನಡಾದ ಹಿತಾಸಕ್ತಿಯ ರಕ್ಷಣೆಗೆ ಸರಕಾರ ಬದ್ಧವಾಗಿದೆ ಎಂದಿದ್ದಾರೆ.
ಕ್ರಿಮಿನಲ್ಗಳು, ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಕ್ರಮ ಕೈಗೊಳ್ಳಲು ಕೆನಡಾ ವಿಫಲವಾಗಿದೆ. ಅಲ್ಲದೆ ಫೆಲೆಸ್ತೀನ್ ರಾಷ್ಟ್ರಕ್ಕೆ ಮಾನ್ಯತೆ ನೀಡುವುದಾಗಿ ಕೆನಡಾ ಘೋಷಿಸಿರುವುದು ಆ ದೇಶದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಅಡ್ಡಿಯಾಗಿದೆ ಎಂದು ಶ್ವೇತಭವನ ಹೇಳಿಕೆ ನೀಡಿದೆ.
Next Story





