“ಏಳು ಹೊಚ್ಚ ಹೊಸ ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು”: ಭಾರತ-ಪಾಕ್ ನಡುವಿನ ಸಂಘರ್ಷ ನಿಲ್ಲಿಸಿದ್ದು ನಾನೇ ಎಂದು ಟ್ರಂಪ್ ಪುನರುಚ್ಛಾರ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Photo: PTI)
ಹೊಸದಿಲ್ಲಿ : ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ "ಏಳು ಹೊಚ್ಚ ಹೊಸ" ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಆದರೆ ಆ ವಿಮಾನಗಳು ಯಾವ ದೇಶಕ್ಕೆ ಸೇರಿದವು ಎಂಬುದನ್ನು ಅವರು ದೃಢಪಡಿಸಿಲ್ಲ. ಆದರೆ ಮತ್ತೊಮ್ಮೆ ಎರಡು ಪರಮಾಣು ಶಕ್ತಿಗಳನ್ನು ಹೊಂದಿರುವ ರಾಷ್ಟ್ರಗಳ ನಡುವಿನ ಯುದ್ಧವನ್ನು ಪರಿಹರಿಸುವುದಾಗಿ ಹೇಳಿಕೊಂಡಿದ್ದಾರೆ.
ಮಂಗಳವಾರ ಟೋಕಿಯೊದಲ್ಲಿ ಉದ್ಯಮಿಗಳೊಂದಿಗೆ ನಡೆದ ಭೋಜನಕೂಟದಲ್ಲಿ ಮಾತನಾಡಿದ ಟ್ರಂಪ್, ಏಳು ಹೊಚ್ಚ ಹೊಸ, ಸುಂದರವಾದ ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು. ಎರಡು ಪರಮಾಣು ಶಕ್ತಿ ರಾಷ್ಟ್ರಗಳ ನಡುವಿನ ಸಂಘರ್ಷವನ್ನು ಬಗೆಹರಿಸಿದ್ದು ನಾನೇ ಎಂದು ಹೇಳಿಕೊಂಡಿದ್ದಾರೆ.
ನಾನು ಪ್ರಧಾನಿ ಮೋದಿಗೆ ಹೇಳಿದೆ. ಅವರು ತುಂಬಾ ಒಳ್ಳೆಯ ವ್ಯಕ್ತಿ, ಪಾಕಿಸ್ತಾನದಲ್ಲಿರುವ ಫೀಲ್ಡ್ ಮಾರ್ಷಲ್ಗೆ ಕೂಡ ಹೇಳಿದೆ, ನೋಡಿ, ನೀವು ಹೋರಾಡುತ್ತಿದ್ದರೆ ನಾವು ಯಾವುದೇ ವ್ಯಾಪಾರವನ್ನು ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ ಎಂದರು.
ಭಾರತ ಮತ್ತು ಪಾಕಿಸ್ತಾನ ಯುಎಸ್ ಜೊತೆಗಿನ ವ್ಯಾಪಾರಕ್ಕೂ ಯುದ್ಧಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಾದಿಸಿವೆ. ನೀವು ಯುದ್ಧ ಮಾಡಿದರೆ ಯಾವುದೇ ಒಪ್ಪಂದಗಳನ್ನು ಮಾಡಿಕೊಳ್ಳುವುದಿಲ್ಲ ಎಂದು ನಾನು ಹೇಳಿದೆ. 24 ಗಂಟೆಗಳಲ್ಲಿ ಅದು ಕೊನೆಗೊಂಡಿತು. ವಾಸ್ತವವಾಗಿ ಅದ್ಭುತ ಒಪ್ಪಂದವಾಗಿತ್ತು ಎಂದು ಅವರು ಹೇಳಿದರು.







