Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿವಾದದ ಬಳಿಕ Nvidiaಗೆ ಮರಳಿದ ಜೆನ್ಸನ್...

ವಿವಾದದ ಬಳಿಕ Nvidiaಗೆ ಮರಳಿದ ಜೆನ್ಸನ್ ವಾಂಗ್‌ಗೆ ಟ್ರಂಪ್ ಸ್ವಾಗತ

‘ಎರಡನೇ ಅವಧಿಯಲ್ಲಿ ಇನ್ನೂ ಉತ್ತಮ ಸಾಧನೆ ಮಾಡಲಿದ್ದಾರೆ’ ಎಂದ ಅಮೆರಿಕ ಅಧ್ಯಕ್ಷ

ವಾರ್ತಾಭಾರತಿವಾರ್ತಾಭಾರತಿಇರ್ಷಾದ್ ಎಂ. ವೇಣೂರು/ವಾರ್ತಾಭಾರತಿಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ27 Nov 2026 7:26 AM IST
share
ವಿವಾದದ ಬಳಿಕ Nvidiaಗೆ ಮರಳಿದ ಜೆನ್ಸನ್ ವಾಂಗ್‌ಗೆ ಟ್ರಂಪ್ ಸ್ವಾಗತ

ವಾಷಿಂಗ್ಟನ್, ನ. 27: ವಿವಾದಗಳು ಮತ್ತು ತನಿಖೆಯ ಹಿನ್ನೆಲೆಯಲ್ಲಿ Nvidia ಸಿಇಒ ಹುದ್ದೆಗೆ ರಾಜೀನಾಮೆ ನೀಡಿದ್ದ ಜೆನ್ಸನ್ ವಾಂಗ್ ಅವರು ಮತ್ತೆ ಅಧಿಕಾರಕ್ಕೆ ಮರಳಿರುವುದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವಾಗತಿಸಿದ್ದಾರೆ. ಇದೊಂದು ‘ಅತ್ಯುತ್ತಮ ಬೆಳವಣಿಗೆ’ ಎಂದು ಹೇಳಿರುವ ಅವರು, ವಾಂಗ್ ಅವರ ಎರಡನೇ ಅವಧಿ ಮೊದಲಿಗಿಂತಲೂ ಉತ್ತಮವಾಗಿರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

"ಅವರು ಮರಳಿರುವುದು ದೊಡ್ಡ ವಿಷಯ. ನಾನು ಅವರೊಂದಿಗೆ ಮಾತನಾಡಿದಾಗ, ಮರಳಿರುವುದಕ್ಕೆ ಅವರು ಬಹಳ ಸಂತೋಷಪಟ್ಟಿದ್ದರು. ಇದನ್ನು ಅವರು ತಮ್ಮ 'ಎರಡನೇ ಅವಧಿ' ಎಂದು ಕರೆಯುತ್ತಾರೆ. ಮೊದಲ ಅವಧಿಗಿಂತ ಎರಡನೇ ಅವಧಿಯಲ್ಲಿ ಅವರು ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸಲಿದ್ದಾರೆ" ಎಂದು ಟ್ರಂಪ್ ಹೇಳಿದ್ದಾರೆ.

Nvidia ಮಂಡಳಿಯು ವಾಂಗ್ ಅವರನ್ನು ಅಧ್ಯಕ್ಷ ಮತ್ತು ಸಿಇಒ ಆಗಿ ಸರ್ವಾನುಮತದಿಂದ ಮರುನೇಮಕ ಮಾಡಿದ ಕೆಲವೇ ದಿನಗಳಲ್ಲಿ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಅವರನ್ನು ಮರಳಿ ಕರೆತರುವ ಉದ್ದೇಶವಿಲ್ಲ ಎಂದು ಹೇಳಿದ್ದ ಮಂಡಳಿ ತನ್ನ ನಿಲುವನ್ನು ಬದಲಿಸಿದೆ.

ಸಿಂಗಾಪುರ ಮೂಲದ ಮೆಗಾಸ್ಪೀಡ್ ಇಂಟರ್‌ನ್ಯಾಷನಲ್‌ ನ ಮಾಜಿ ಕಾರ್ಯನಿರ್ವಾಹಕಿ ಆಲಿಸ್ ವಾಂಗ್ ಸೇರಿದಂತೆ ಹಲವು ಮಹಿಳೆಯರೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜೆನ್ಸನ್ ವಾಂಗ್ ನ. 12ರಂದು ಕಂಪೆನಿಗೆ ರಾಜೀನಾಮೆ ನೀಡಿದ್ದರು. ಆಲಿಸ್ ವಾಂಗ್ ಅವರಿಗೆ ಚೀನಾದ ಗುಪ್ತಚರ ಸಂಸ್ಥೆಗಳೊಂದಿಗೆ ಸಂಪರ್ಕವಿದೆ ಎಂದು ಅಮೆರಿಕದ ಗುಪ್ತಚರ ಅಧಿಕಾರಿಗಳು ಶಂಕಿಸಿದ್ದರು. ಆದರೆ, ಈ ಆರೋಪಗಳು ಸಾಬೀತಾಗಿಲ್ಲ. ಚೀನಾ ಕೂಡ ಆರೋಪಗಳನ್ನು ನಿರಾಕರಿಸಿದೆ.

ವಾಂಗ್ ಅವರ ಮರುನೇಮಕಕ್ಕೆ ಟ್ರಂಪ್ ಮಂಡಳಿಯ ನಿರ್ಧಾರಕ್ಕೂ ಮೊದಲೇ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿದ್ದರು. ಕಳೆದ ವಾರ ಚೀನಾದ ಶೆನ್‌ಜೆನ್‌ ನಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ನಡೆದ ಸಭೆಯಲ್ಲಿ ವಾಂಗ್ ಅವರಿಗೆ ‘ಎರಡನೇ ಅವಕಾಶ’ ನೀಡಬೇಕು ಎಂದು ತಾನು ಕ್ಸಿ ಅವರಿಗೆ ತಿಳಿಸಿದ್ದಾಗಿ ಟ್ರಂಪ್ ಹೇಳಿದ್ದರು.

ಸೋಮವಾರ Nvidia ವಾಂಗ್ ಅವರನ್ನು ಮರುನೇಮಕ ಮಾಡುವುದಾಗಿ ಘೋಷಿಸಿದ ಬಳಿಕ ಟ್ರಂಪ್ ಈ ನಿರ್ಧಾರವನ್ನು ‘ಸರಿಯಾದ ಮತ್ತು ಸೂಕ್ತ ನಿರ್ಧಾರ’ ಎಂದು ಅಭಿಪ್ರಾಯಪಟ್ಟರು. ವಾಂಗ್ ಅವರನ್ನು ‘ಮಹಾನ್ ದೇಶಭಕ್ತ ಮತ್ತು ದೇಶದ ಸಂಪತ್ತು’ ಎಂದು ಕರೆದಿದ್ದ ಅವರು, Nvidia ಹಾಗೂ ಅಮೆರಿಕದ ಆರ್ಥಿಕತೆಯ ಯಶಸ್ಸಿಗೆ ಅವರ ನಾಯಕತ್ವ ಅಗತ್ಯ ಎಂದು ಪ್ರತಿಪಾದಿಸಿದ್ದರು.

ವಾಂಗ್ ಅವರ ಮರುನೇಮಕದಿಂದ ರಾಷ್ಟ್ರೀಯ ಭದ್ರತೆಗೆ ಯಾವುದೇ ಅಪಾಯವಿಲ್ಲ ಎಂಬ ವಿಶ್ವಾಸವನ್ನು ಅಮೆರಿಕ ಸರಕಾರ ಹೊಂದಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ವಾಂಗ್ ಅವರು ಯಾವುದೇ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿರುವುದಕ್ಕೆ ಸರಕಾರದ ಬಳಿ ಸಾಕ್ಷ್ಯಗಳಿಲ್ಲ ಎಂದು ಅಟಾರ್ನಿ ಜನರಲ್ ದೃಢಪಡಿಸಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ.

ವಾಂಗ್ ಅವರೊಂದಿಗೆ ಚರ್ಚೆ ನಡೆಸಿ, ಅಮೆರಿಕ ಸರಕಾರದ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಅವರನ್ನು ಮರುನೇಮಕ ಮಾಡಲು ಮಂಡಳಿಯು ಸರ್ವಾನುಮತದಿಂದ ನಿರ್ಧರಿಸಿದೆ ಎಂದು Nvidia ತಿಳಿಸಿದೆ. ಅವರ ಮರಳುವಿಕೆಯಿಂದ ರಾಷ್ಟ್ರೀಯ ಭದ್ರತೆಗೆ ಯಾವುದೇ ಅಪಾಯವಿಲ್ಲ ಎಂಬ ವಿಶ್ವಾಸ ತಮಗಿದೆ ಎಂದು ಕಂಪೆನಿ ಹೇಳಿದೆ.

ಹಾರ್ವೆ ಸಿ. ಜೋನ್ಸ್ ಅವರು ಮಂಡಳಿಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಮಧ್ಯಂತರ ಸಿಇಒ ಆಗಿ ಕಾರ್ಯನಿರ್ವಹಿಸಿದ್ದ ಕೊಲೆಟ್ ಕ್ರೆಸ್ ಅವರು ಮತ್ತೆ ಮುಖ್ಯ ಹಣಕಾಸು ಅಧಿಕಾರಿ (CFO) ಹುದ್ದೆಗೆ ಮರಳಿದ್ದಾರೆ.

ಇದೇ ವೇಳೆ, ವಿದೇಶಿ ಗುಪ್ತಚರ ಕಾರ್ಯಾಚರಣೆಯ ಆರೋಪಗಳ ಕುರಿತು ಸ್ವತಂತ್ರ ತನಿಖೆಯನ್ನು ಮುಂದುವರಿಸುವುದಾಗಿ Nvidia ತಿಳಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ರಫ್ತು ನಿಯಂತ್ರಣಕ್ಕೆ ಸಂಬಂಧಿಸಿದ ಅಪಾಯಗಳ ಮೇಲ್ವಿಚಾರಣೆಗಾಗಿ ಪ್ರತ್ಯೇಕ ಸಮಿತಿಯನ್ನು ರಚಿಸಿರುವ ಕಂಪೆನಿ, 'ಚೀಫ್ ಕಂಪ್ಲೈಯನ್ಸ್ ಆಫೀಸರ್' (ನಿಯಮ ಪಾಲನೆ ಮುಖ್ಯಸ್ಥ) ಹುದ್ದೆಗೆ ವ್ಯಕ್ತಿಯೊಬ್ಬರನ್ನು ನೇಮಕ ಮಾಡಲು ಉದ್ದೇಶಿಸಿದೆ.

ಅಮೆರಿಕದ ರಫ್ತು ನಿಯಮಗಳ ಪಾಲನೆಗೆ ಸಂಬಂಧಿಸಿದ ಆಂತರಿಕ ತನಿಖೆಯನ್ನು ಮುಂದುವರಿಸುವಂತೆಯೂ ಟ್ರಂಪ್ Nvidiaವನ್ನು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ
ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ

ಇರ್ಷಾದ್ ಎಂ. ವೇಣೂರು ಅವರು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ 13 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ‘ವಾರ್ತಾಭಾರತಿ’ಯಲ್ಲಿ ಡಿಜಿಟಲ್ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಡೆಕ್ಕನ್ ಹೆರಾಲ್ಡ್–ಪ್ರಜಾವಾಣಿ’ ಸಮೂಹದಲ್ಲಿ ಫೋಟೊ ಜರ್ನಲಿಸ್ಟ್ ಆಗಿಯೂ ಕೆಲಸ ಮಾಡಿದ್ದಾರೆ. ಅಂತರರಾಷ್ಟ್ರೀಯ ವಿದ್ಯಮಾನಗಳು, ಮಧ್ಯಪ್ರಾಚ್ಯದ ಸಂಘರ್ಷಗಳು, ಗಲ್ಫ್ ರಾಷ್ಟ್ರಗಳ ಬೆಳವಣಿಗೆಗಳು, ರಾಜಕೀಯ, ವಾಯುಯಾನ, ಅಪರಾಧ ಮತ್ತು ಕ್ರೀಡೆ ಅವರ ಆಸಕ್ತಿಯ ಸುದ್ದಿ ಕ್ಷೇತ್ರಗಳಾಗಿವೆ.

Next Story
X