8.8 ತೀವ್ರತೆಯ ಪ್ರಬಲ ಭೂಕಂಪದ ಬೆನ್ನಲ್ಲೇ ರಷ್ಯಾ, ಜಪಾನ್ ಕರಾವಳಿಗೆ ಅಪ್ಪಳಿಸಿದ ಸುನಾಮಿ : ಜನರ ಸ್ಥಳಾಂತರ

ಟೋಕಿಯೋ : ರಷ್ಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿರುವ ಬೆನ್ನಲ್ಲೇ ರಷ್ಯಾ ಮತ್ತು ಜಪಾನ್ ಬಂದರಿಗೆ ಸುನಾಮಿ ಅಲೆಗಳು ಅಪ್ಪಳಿಸಿವೆ ಎಂದು ವರದಿಯಾಗಿದೆ.
ಜಪಾನ್ ಹವಾಮಾನ ಸಂಸ್ಥೆ ಪ್ರಕಾರ, 50 ಸೆಂಟಿಮೀಟರ್‌ಗಳಷ್ಟು ಎತ್ತರದ ಅಲೆಗಳು ಮಿಯಾಗಿ ಪ್ರಾಂತ್ಯದ ಇಶಿನೊಮಕಿಗೆ ಅಪ್ಪಳಿಸಿದೆ. ಇದರಿಂದ ಹಿಯೋರಿಯಾಮಾ ಪರ್ವತ ಸೇರಿದಂತೆ ಎತ್ತರದ ಪ್ರದೇಶಗಳಿಗೆ ಜನರನ್ನು ಸ್ಥಳಾಂತರಿಸಲಾಗಿದೆ.
ರಷ್ಯಾದ ಪೂರ್ವ ಭಾಗದ ಕಮ್ಚಟ್ಕಾ ದ್ವೀಪದಲ್ಲಿ ಬುಧವಾರ 8.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. 2011ರ ನಂತರದ ವಿಶ್ವದ ಅತ್ಯಂತ ಪ್ರಬಲ ಭೂಕಂಪಗಳಲ್ಲಿ ಇದು ಒಂದಾಗಿದೆ. ಭೂಕಂಪದ ಬಳಿಕ ಅಮೆರಿಕ, ಜಪಾನ್ ಸೇರಿದಂತೆ ಸಮೀಪದ ಇತರ ದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿತ್ತು.
ಭೂಕಂಪದ ನಂತರ, ಕಮ್ಚಟ್ಕಾ ಪ್ರದೇಶದ ಕೆಲವು ಭಾಗಗಳಲ್ಲಿ 3 ರಿಂದ 4 ಮೀಟರ್ ಎತ್ತರದ ಅಲೆಗಳ ಸುನಾಮಿ ಅಪ್ಪಳಿಸಿದೆ ಎಂದು ವರದಿಯಾಗಿದೆ.
ಜಪಾನ್‌ನಲ್ಲಿ ಇಲ್ಲಿಯವರೆಗೆ ಯಾವುದೇ ಗಾಯಗಳು ಅಥವಾ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಜಪಾನ್‌ನ ಪೆಸಿಫಿಕ್ ಕರಾವಳಿಯಾದ್ಯಂತ ಜನರ ಸ್ಥಳಾಂತರಕ್ಕೆ ಅಧಿಕಾರಿಗಳು ಆದೇಶಿಸಿದ್ದಾರೆ.





