UAE : 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧ

ಸಾಂದರ್ಭಿಕ ಚಿತ್ರ (AI)
ಅಬುಧಾಬಿ, ಜೂ.18: ಮಕ್ಕಳಿಗಾಗಿ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ಮೊದಲ ಅರಬ್ ದೇಶ ಎಂಬ ಹೆಗ್ಗಳಿಕೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪಾತ್ರವಾಗಿದೆ.
ಯುಎಇ ಸರಕಾರ ಗುರುವಾರದಂದು ಸಾಮಾಜಿಕ ಜಾಲತಾಣಗಳ ಬಳಕೆಗೆ ಕನಿಷ್ಠ ವಯಸ್ಸನ್ನು ನಿಗದಿಪಡಿಸುವ ನಿರ್ಣಯಕ್ಕೆ ಅನುಮೋದನೆ ನೀಡಿದೆ.
ಈ ಆದೇಶದ ಪ್ರಕಾರ, 15 ವರ್ಷದೊಳಗಿನ ಮಕ್ಕಳು ವೈಯಕ್ತಿಕ ಸಾಮಾಜಿಕ ಜಾಲತಾಣ ಖಾತೆಗಳನ್ನು ತೆರೆಯುವುದನ್ನು ಅಥವಾ ಬಳಸುವುದನ್ನು ನಿಷೇಧಿಸಲಾಗಿದೆ ಮತ್ತು ಈ ಪ್ಲಾಟ್ಫಾರ್ಮ್ಗಳ ಸಂಪೂರ್ಣ `ಫೀಚರ್'ಗಳನ್ನು ಬಳಸದಂತೆ ಅವರಿಗೆ ನಿರ್ಬಂಧ ವಿಧಿಸಲಾಗಿದೆ.
Next Story




