ಪಹಲ್ಗಾಮ್ ದಾಳಿ ಬಗ್ಗೆ ಪಾಕ್ ಮುಂದೆ ಕಠಿಣ ಪ್ರಶ್ನೆಗಳನ್ನಿಟ್ಟ ವಿಶ್ವಸಂಸ್ಥೆಯ ಭದ್ರತಾ ಮಂಡಳಿ

Credit | iStock Photo
ಹೊಸದಿಲ್ಲಿ : ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಬಗ್ಗೆ ಚರ್ಚೆ ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ರಹಸ್ಯ ಸಮಾಲೋಚನೆ ನಡೆಸಿದೆ. ಈ ವೇಳೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಪಾಕಿಸ್ತಾನದ ಮುಂದೆ ಕಠಿಣ ಪ್ರಶ್ನೆಗಳನ್ನಿಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
26 ಪ್ರವಾಸಿಗರು ಹತ್ಯೆಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರೆ-ತೊಯ್ಬಾದ ಕೈವಾಡದ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪಾಕಿಸ್ತಾನವನ್ನು ಪ್ರಶ್ನಿಸಿದೆ ಮತ್ತು ಉತ್ತರದಾಯಿತ್ವವನ್ನು ಬಯಸಿದೆ ಎಂದು ವರದಿಯಾಗಿದೆ.
ದಾಳಿಯ ವೇಳೆ ಪ್ರವಾಸಿಗರನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಿ ಹತ್ಯೆ ಮಾಡಿರುವ ಬಗ್ಗೆಯೂ ಭದ್ರತಾ ಮಂಡಳಿಯ ಕೆಲವು ಸದಸ್ಯರು ಸಭೆಯಲ್ಲಿ ಪ್ರಸ್ತಾಪಿಸಿದರು.
ಪಾಕಿಸ್ತಾನದ ಇತ್ತೀಚಿನ ಕ್ಷಿಪಣಿ ಪರೀಕ್ಷೆಗಳ ಬಗ್ಗೆ ಭದ್ರತಾ ಮಂಡಳಿಯ ಸದಸ್ಯರು ಕಳವಳ ವ್ಯಕ್ತಪಡಿಸಿದರು. ಪಾಕಿಸ್ತಾನವು ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಪರಿಸ್ಥಿತಿಯ ಕುರಿತು ರಹಸ್ಯ ಸಮಾಲೋಚನೆ ನಡೆಸುವಂತೆ ಕೋರಿತ್ತು.





