ಭಾರತ ಸೇರಿದಂತೆ 7 ದೇಶಗಳ ಸರಕುಗಳ ಮೇಲೆ ಶೇ. 25ರಷ್ಟು ಸುಂಕ ಪ್ರಸ್ತಾಪಿಸಿದ ಅಮೆರಿಕ
ಚೀನಾದ ಸರಕುಗಳ ಮೇಲೆ ಶೇ. 40ರಷ್ಟು ಸುಂಕದ ಗುರಿ; ಹೆಚ್ಚುವರಿ ಕೈಗಾರಿಕಾ ಉತ್ಪಾದನೆ ನಿಯಂತ್ರಿಸಲು ಟ್ರಂಪ್ ಕ್ರಮ

ಡೊನಾಲ್ಡ್ ಟ್ರಂಪ್ | Photo Credit : PTI
ವಾಷಿಂಗ್ಟನ್: ಭಾರತ ಸೇರಿದಂತೆ ಏಳು ದೇಶಗಳಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ. 25ರಷ್ಟು ಸುಂಕ ವಿಧಿಸಲು ಅಮೆರಿಕ ಪ್ರಸ್ತಾಪಿಸಿದೆ. ಪ್ರಮುಖ ವ್ಯಾಪಾರ ಪಾಲುದಾರ ರಾಷ್ಟ್ರಗಳಲ್ಲಿ ಮಾರುಕಟ್ಟೆಯ ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿರುವ ಕೈಗಾರಿಕಾ ಉತ್ಪಾದನೆಯನ್ನು ನಿಯಂತ್ರಿಸುವ ಉದ್ದೇಶದಿಂದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಈ ಕ್ರಮಕ್ಕೆ ಮುಂದಾಗಿದೆ.
ಅಮೆರಿಕದ ವ್ಯಾಪಾರ ಪ್ರತಿನಿಧಿ (USTR) ರೂಪಿಸಿರುವ ಯೋಜನೆಯಡಿ ಭಾರತ, ಕಾಂಬೋಡಿಯಾ, ಇಂಡೋನೇಷ್ಯಾ, ದಕ್ಷಿಣ ಕೊರಿಯಾ, ಮಲೇಷ್ಯಾ, ತೈವಾನ್ ಮತ್ತು ಥಾಯ್ಲೆಂಡ್ ದೇಶಗಳಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ. 25ರಷ್ಟು ಸುಂಕ ವಿಧಿಸಲು ಉದ್ದೇಶಿಸಲಾಗಿದೆ. ಚೀನಾದ ಸರಕುಗಳ ಮೇಲೆ ಶೇ. 40ರಷ್ಟು ಸುಂಕ ವಿಧಿಸುವ ಪ್ರಸ್ತಾಪವೂ ಇದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
Next Story




