Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. USA | ತಾಂತ್ರಿಕ ದೋಷದಿಂದ 1,000ಕ್ಕೂ...

USA | ತಾಂತ್ರಿಕ ದೋಷದಿಂದ 1,000ಕ್ಕೂ ಹೆಚ್ಚು ಡೆಲ್ಟಾ ವಿಮಾನಗಳ ಹಾರಾಟ ವಿಳಂಬ

ವಾರ್ತಾಭಾರತಿವಾರ್ತಾಭಾರತಿಇರ್ಷಾದ್ ಎಂ. ವೇಣೂರು/ವಾರ್ತಾಭಾರತಿಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ23 Nov 2026 10:00 AM IST
share
USA | ತಾಂತ್ರಿಕ ದೋಷದಿಂದ 1,000ಕ್ಕೂ ಹೆಚ್ಚು ಡೆಲ್ಟಾ ವಿಮಾನಗಳ ಹಾರಾಟ ವಿಳಂಬ

ನ್ಯೂಯಾರ್ಕ್: ಅಮೆರಿಕದಲ್ಲಿ ವಿಮಾನದ ತೂಕ ಲೆಕ್ಕಾಚಾರ ಮಾಡುವ ಸ್ವಯಂಚಾಲಿತ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ರವಿವಾರ 1,000ಕ್ಕೂ ಹೆಚ್ಚು ಡೆಲ್ಟಾ ಏರ್‌ಲೈನ್ಸ್ ವಿಮಾನಗಳ ಹಾರಾಟ ವಿಳಂಬಗೊಂಡಿದೆ.

ಥ್ಯಾಂಕ್ಸ್‌ ಗಿವಿಂಗ್ ರಜಾದಿನದ ಪ್ರಯಾಣದ ಸಿದ್ಧತೆಯ ನಡುವೆಯೇ ಈ ಅಡಚಣೆ ಎದುರಾಗಿದ್ದು, ಪ್ರಯಾಣಿಕರಿಗೆ ತೊಂದರೆಯಾಗಿದೆ.

ವಿಮಾನ ಹಾರಾಟಕ್ಕೆ ಮೊದಲು ಅದರ ತೂಕ ಸುರಕ್ಷಿತ ಮಿತಿಯಲ್ಲಿದೆಯೇ ಎಂಬುದನ್ನು ಪರಿಶೀಲಿಸುವ ಸ್ವಯಂಚಾಲಿತ ವ್ಯವಸ್ಥೆ ಸ್ಥಗಿತಗೊಂಡಿತ್ತು. ಇದರಿಂದ ವಿಮಾನಗಳ ತೂಕವನ್ನು ಮಾನವ ಹಸ್ತಕ್ಷೇಪದಿಂದ ಲೆಕ್ಕ ಹಾಕಿ ಹಾರಾಟಕ್ಕೆ ಸಿದ್ಧಪಡಿಸಬೇಕಾಯಿತು. ವ್ಯವಸ್ಥೆಯನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತಿರುವಾಗ ಮಾನವ ಚಾಲಿತ ವಿಧಾನಗಳನ್ನು ಬಳಸಿದ್ದಾಗಿ ಡೆಲ್ಟಾ ತಿಳಿಸಿತ್ತು. ಕೆಲವು ಗಂಟೆಗಳ ಬಳಿಕ ವ್ಯವಸ್ಥೆ ಮತ್ತೆ ಕಾರ್ಯಾರಂಭ ಮಾಡಿದ್ದರೂ ವಿಮಾನಗಳ ಕಾರ್ಯಾಚರಣೆ ತಕ್ಷಣ ಸಹಜ ಸ್ಥಿತಿಗೆ ಮರಳಿರಲಿಲ್ಲ.

ವಿಳಂಬದಿಂದಾಗಿ ಹೋಟೆಲ್ ವಸತಿ ಅಥವಾ ಊಟದ ಅಗತ್ಯವಿರುವ ಪ್ರಯಾಣಿಕರಿಗೆ ನೆರವು ನೀಡುತ್ತಿರುವುದಾಗಿ ಡೆಲ್ಟಾ ಹೇಳಿದೆ. ದಿನದ ಅಂತ್ಯದ ವೇಳೆಗೆ ವಿಳಂಬಗೊಂಡ ಎಲ್ಲ ವಿಮಾನಗಳನ್ನೂ ಹಾರಾಟ ನಡೆಸುವಂತೆ ಮಾಡುವ ನಿರೀಕ್ಷೆಯಿದೆ ಎಂದು ಕಂಪೆನಿ ತಿಳಿಸಿತ್ತು.

ರವಿವಾರ ಬೆಳಿಗ್ಗೆ ಡೆಲ್ಟಾದ ಪ್ರಮುಖ ಕೇಂದ್ರವಾಗಿರುವ ಹಾರ್ಟ್ಸ್‌ಫೀಲ್ಡ್-ಜಾಕ್ಸನ್ ಅಟ್ಲಾಂಟಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಕೆಲವು ವಿಮಾನಗಳ ಮೇಲೆ ಫೆಡರಲ್ ವಿಮಾನಯಾನ ಆಡಳಿತ (FAA) ಸುಮಾರು ಒಂದು ಗಂಟೆಯ ನೆಲದ ನಿಲುಗಡೆ ನಿರ್ಬಂಧ ವಿಧಿಸಿತ್ತು.

ವಿಮಾನಗಳ ತೂಕ ಮತ್ತು ಸಮತೋಲನ ಮಿತಿಗಳನ್ನು ಪಾಲಿಸುವುದು ಹಾರಾಟದ ಸುರಕ್ಷತೆಗೆ ಅತ್ಯಂತ ಮುಖ್ಯ. ಈ ಮಿತಿಗಳನ್ನು ಮೀರುವುದು ವಿಮಾನದ ರಚನಾತ್ಮಕ ಸುರಕ್ಷತೆಗೆ ಧಕ್ಕೆಯುಂಟುಮಾಡಬಹುದು ಎಂದು FAA ದಾಖಲೆಗಳು ತಿಳಿಸಿವೆ. ಆದರೆ, ಈ ವಿಳಂಬಗಳು FAAಯ ವಾಯು ಸಂಚಾರ ನಿಯಂತ್ರಣ ವ್ಯವಸ್ಥೆಗೆ ಸಂಬಂಧಿಸಿಲ್ಲ ಎಂದು ಸಂಸ್ಥೆ ಸಾಮಾಜಿಕ ಜಾಲತಾಣ Xನಲ್ಲಿ ಸ್ಪಷ್ಟಪಡಿಸಿದೆ.

ಈ ತಿಂಗಳ ಆರಂಭದಲ್ಲಿಯೂ FAAಯ ನೆಟ್‌ವರ್ಕ್‌ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದರಿಂದ ಕಳೆದ 25 ವರ್ಷಗಳಲ್ಲಿ ದೇಶಾದ್ಯಂತ ಅತಿ ದೀರ್ಘಾವಧಿಯ ನೆಲದ ನಿಲುಗಡೆ ಸಂಭವಿಸಿತ್ತು. ನಾಲ್ಕು ಗಂಟೆಗೂ ಹೆಚ್ಚು ಕಾಲ ನಡೆದ ಈ ಅಡಚಣೆಯಿಂದ ಹಲವು ವಿಮಾನಗಳನ್ನು ರದ್ದುಗೊಳಿಸಲಾಗಿತ್ತು ಹಾಗೂ ವಿಳಂಬಗೊಳಿಸಲಾಗಿತ್ತು. ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯನ್ನು ಸಹಜ ಸ್ಥಿತಿಗೆ ತರಲು ಹರಸಾಹಸ ಪಟ್ಟಿದ್ದವು. ಇದಾದ ಕೆಲವೇ ದಿನಗಳಲ್ಲಿ ಯುನೈಟೆಡ್ ಏರ್‌ಲೈನ್ಸ್‌ ನ ವ್ಯವಸ್ಥೆಯಲ್ಲಿಯೂ ತಾಂತ್ರಿಕ ಅಡಚಣೆ ಕಾಣಿಸಿಕೊಂಡು ವಿಮಾನಗಳ ಹಾರಾಟ ವಿಳಂಬವಾಗಿತ್ತು.

ತಂತ್ರಜ್ಞಾನ ಸಂಬಂಧಿತ ಸಮಸ್ಯೆಗಳು ಅಮೆರಿಕನ್ನರ ದೈನಂದಿನ ಜೀವನಕ್ಕೆ ಹೆಚ್ಚಾಗಿ ಅಡ್ಡಿಯಾಗುತ್ತಿರುವ ನಡುವೆಯೇ ಡೆಲ್ಟಾ ವಿಮಾನಗಳ ವಿಳಂಬ ಸಂಭವಿಸಿದೆ. ಅಲ್ಲದೆ, ಅಮೆರಿಕದಲ್ಲಿ ವರ್ಷದ ಅತ್ಯಂತ ಹೆಚ್ಚು ಪ್ರಯಾಣಿಕರು ಸಂಚರಿಸುವ ಥ್ಯಾಂಕ್ಸ್‌ ಗಿವಿಂಗ್ ರಜಾದಿನಕ್ಕೆ ಕೆಲವೇ ದಿನಗಳಿರುವಾಗ ಈ ಅಡಚಣೆ ಎದುರಾಗಿದೆ.

ರವಿವಾರ ಸಂಜೆಯ ವೇಳೆಗೆ ಡೆಲ್ಟಾದ ಸುಮಾರು ಶೇ. 58ರಷ್ಟು, ಅಂದರೆ ಸುಮಾರು 2,000 ವಿಮಾನಗಳು ವಿಳಂಬಗೊಂಡಿದ್ದವು ಎಂದು ವಿಮಾನಗಳ ಸಂಚಾರದ ಮಾಹಿತಿ ನೀಡುವ ಫ್ಲೈಟ್‌ಅವೇರ್ ತಿಳಿಸಿದೆ. ಅಟ್ಲಾಂಟಾ ವಿಮಾನ ನಿಲ್ದಾಣದಿಂದ ಹೊರಡುವ ಸುಮಾರು ಶೇ. 58ರಷ್ಟು ವಿಮಾನಗಳು ವಿಳಂಬಗೊಂಡಿದ್ದರೆ, ಅಲ್ಲಿಗೆ ಆಗಮಿಸಬೇಕಿದ್ದ ಸುಮಾರು ಶೇ. 50ರಷ್ಟು ವಿಮಾನಗಳೂ ವಿಳಂಬವಾಗಿದ್ದವು. ಅಟ್ಲಾಂಟಾ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ವಿಮಾನಗಳ ಕಾರ್ಯಾಚರಣೆಯನ್ನು ಡೆಲ್ಟಾ ನಿರ್ವಹಿಸುತ್ತದೆ.

ಫ್ಲೈಟ್‌ಅವೇರ್ ದಾಖಲಿಸಿದ ಸುಮಾರು ಶೇ. 70ರಷ್ಟು ವಿಳಂಬ ಮತ್ತು ವಿಮಾನ ರದ್ದತಿಗಳು ಸ್ವಯಂಚಾಲಿತ ವ್ಯವಸ್ಥೆಯ ತಾಂತ್ರಿಕ ದೋಷದಿಂದ ಸಂಭವಿಸಿದ್ದರೆ, ಉಳಿದವು ಪ್ರತಿಕೂಲ ಹವಾಮಾನದ ಪರಿಣಾಮವಾಗಿವೆ ಎಂದು ಡೆಲ್ಟಾ ಹೇಳಿದೆ.

ಮಧ್ಯಾಹ್ನದ ವೇಳೆಗೆ ಡೆಲ್ಟಾ ವಿಳಂಬಕ್ಕೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿತ್ತು. ಪ್ರಯಾಣಿಕರನ್ನು ಬೇರೆ ವಿಮಾನಗಳಲ್ಲಿ ಮರುಬುಕ್ ಮಾಡಲಾಗುತ್ತಿದ್ದು, ಅಗತ್ಯವಿರುವವರಿಗೆ ಊಟ ಮತ್ತು ಹೋಟೆಲ್ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ವಿಮಾನ ರದ್ದಾದಲ್ಲಿ ಮರುಪಾವತಿ ನೀಡುವುದಾಗಿಯೂ ಕಂಪೆನಿ ತಿಳಿಸಿದೆ. ಫ್ಲೈಟ್‌ಅವೇರ್ ಮಾಹಿತಿ ಪ್ರಕಾರ, ಡೆಲ್ಟಾದ ಸುಮಾರು ಶೇ. 3ರಷ್ಟು ವಿಮಾನಗಳು ರದ್ದಾಗಿದ್ದವು.

Tags

USADelta flightstechnical glitch
share
ವಾರ್ತಾಭಾರತಿ
ವಾರ್ತಾಭಾರತಿ
ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ
ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ

ಇರ್ಷಾದ್ ಎಂ. ವೇಣೂರು ಅವರು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ 13 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ‘ವಾರ್ತಾಭಾರತಿ’ಯಲ್ಲಿ ಡಿಜಿಟಲ್ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಡೆಕ್ಕನ್ ಹೆರಾಲ್ಡ್–ಪ್ರಜಾವಾಣಿ’ ಸಮೂಹದಲ್ಲಿ ಫೋಟೊ ಜರ್ನಲಿಸ್ಟ್ ಆಗಿಯೂ ಕೆಲಸ ಮಾಡಿದ್ದಾರೆ. ಅಂತರರಾಷ್ಟ್ರೀಯ ವಿದ್ಯಮಾನಗಳು, ಮಧ್ಯಪ್ರಾಚ್ಯದ ಸಂಘರ್ಷಗಳು, ಗಲ್ಫ್ ರಾಷ್ಟ್ರಗಳ ಬೆಳವಣಿಗೆಗಳು, ರಾಜಕೀಯ, ವಾಯುಯಾನ, ಅಪರಾಧ ಮತ್ತು ಕ್ರೀಡೆ ಅವರ ಆಸಕ್ತಿಯ ಸುದ್ದಿ ಕ್ಷೇತ್ರಗಳಾಗಿವೆ.

Next Story
X