Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಝಾದ ಮಹಿಳೆಯರು, ಬಾಲಕಿಯರ ಮೇಲಿನ...

ಗಾಝಾದ ಮಹಿಳೆಯರು, ಬಾಲಕಿಯರ ಮೇಲಿನ ದೌರ್ಜನ್ಯ ನರಮೇಧದ ಅವಿಭಾಜ್ಯ ಅಂಗ: ಅಮ್ನೆಸ್ಟಿ ಇಂಟರ್‌ನ್ಯಾಷನಲ್ ವರದಿ

ಹತ್ಯೆ, ಗಾಯ, ಬಲವಂತದ ಸ್ಥಳಾಂತರ; ಆರೋಗ್ಯ ಸೇವೆ ನಿರಾಕರಣೆ, ಹಸಿವಿನಿಂದ ನರಳುವಂತೆ ಮಾಡಿದ ಆರೋಪ

ವಾರ್ತಾಭಾರತಿವಾರ್ತಾಭಾರತಿಇರ್ಷಾದ್ ಎಂ. ವೇಣೂರು/ವಾರ್ತಾಭಾರತಿಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ25 Nov 2026 7:59 AM IST
share
ಗಾಝಾದ ಮಹಿಳೆಯರು, ಬಾಲಕಿಯರ ಮೇಲಿನ ದೌರ್ಜನ್ಯ ನರಮೇಧದ ಅವಿಭಾಜ್ಯ ಅಂಗ: ಅಮ್ನೆಸ್ಟಿ ಇಂಟರ್‌ನ್ಯಾಷನಲ್ ವರದಿ

ಗಾಝಾ: ಗಾಝಾದಲ್ಲಿ ಕಳೆದ ಮೂರು ವರ್ಷಗಳಿಂದ ಇಸ್ರೇಲಿ ಪಡೆಗಳು ಮಹಿಳೆಯರು ಮತ್ತು ಬಾಲಕಿಯರ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗಿವೆ. ಅವರನ್ನು ಹತ್ಯೆಗೈಯುವುದು, ಗಾಯಗೊಳಿಸುವುದು, ಬಲವಂತವಾಗಿ ಸ್ಥಳಾಂತರಿಸುವುದು ಹಾಗೂ ಕಾನೂನುಬಾಹಿರವಾಗಿ ಬಂಧಿಸುವ ಮೂಲಕ ತೀವ್ರ ಹಾನಿ ಉಂಟುಮಾಡಿವೆ. ಈ ಕೃತ್ಯಗಳು ಫೆಲೆಸ್ತೀನಿಯನ್ನರ ವಿರುದ್ಧ ಇಸ್ರೇಲ್ ನಡೆಸುತ್ತಿರುವ ನರಮೇಧದ ಅವಿಭಾಜ್ಯ ಅಂಗಗಳಾಗಿವೆ ಎಂದು ಅಮ್ನೆಸ್ಟಿ ಇಂಟರ್‌ನ್ಯಾಷನಲ್ ತನ್ನ ವರದಿಯಲ್ಲಿ ಆರೋಪಿಸಿದೆ ಎಂದು Aljazeera ವರದಿ ಮಾಡಿದೆ.

‘ಬದುಕಲು ಸಾಧ್ಯವಾಗದ ಪರಿಸ್ಥಿತಿ: ಗಾಝಾದಲ್ಲಿ ಮಹಿಳೆಯರು, ಬಾಲಕಿಯರು ಮತ್ತು ಫೆಲೆಸ್ತೀನಿಯನ್ನರ ವಿರುದ್ಧ ಇಸ್ರೇಲ್‌ನ ನರಮೇಧದ ಲಿಂಗಾಧಾರಿತ ಆಯಾಮಗಳು’ ಎಂಬ ಶೀರ್ಷಿಕೆಯ ವರದಿಯಲ್ಲಿ 2023ರ ಅ. 7ರಿಂದ 2026ರ ಅ. 1ರವರೆಗಿನ ಅವಧಿಯಲ್ಲಿ ಇಸ್ರೇಲಿ ಸೇನೆಯು ಮಹಿಳೆಯರು ಮತ್ತು ಬಾಲಕಿಯರನ್ನು ಹತ್ಯೆಗೈದ, ಗಾಯಗೊಳಿಸಿದ, ಬಲವಂತವಾಗಿ ಸ್ಥಳಾಂತರಿಸಿದ ಹಾಗೂ ಕಾನೂನುಬಾಹಿರವಾಗಿ ಬಂಧಿಸಿದ ಘಟನೆಗಳನ್ನು ವಿವರಿಸಲಾಗಿದೆ.

ಗಾಝಾದ ಮಹಿಳೆಯರು ಮತ್ತು ಬಾಲಕಿಯರಿಗೆ ಮೂಲಭೂತ ಆರೋಗ್ಯ ಸೇವೆಗಳು ಹಾಗೂ ಸಂತಾನೋತ್ಪತ್ತಿಗೆ ಸಂಬಂಧಿಸಿದ ವೈದ್ಯಕೀಯ ಸೇವೆಗಳನ್ನು ಪಡೆಯಲು ಅವಕಾಶ ನಿರಾಕರಿಸಲಾಗಿದೆ. ಅಲ್ಲದೆ, ಆಹಾರ ದೊರೆಯದಂತೆ ಮಾಡಿ ಅವರನ್ನು ಹಸಿವಿನಿಂದ ನರಳುವಂತೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

"ಇಸ್ರೇಲ್ ನಡೆಸುತ್ತಿರುವ ನರಮೇಧದ ಆಳವಾದ ಲಿಂಗಾಧಾರಿತ ಆಯಾಮಗಳನ್ನು ಈ ವರದಿ ಬಹಿರಂಗಪಡಿಸುತ್ತದೆ. ಮಹಿಳೆಯರು ಮತ್ತು ಬಾಲಕಿಯರ ಬದುಕನ್ನು ನಾಶಪಡಿಸುತ್ತಿರುವ ಕ್ರೂರ ದೌರ್ಜನ್ಯಗಳು ಹಾಗೂ ಅವರು ಅನುಭವಿಸುತ್ತಿರುವ ತೀವ್ರ ಯಾತನೆಯ ಕುರಿತು ಹೊಸ ವಿವರಗಳನ್ನು ಇದು ತೆರೆದಿಡುತ್ತದೆ. ಕದನ ವಿರಾಮ ಎಂದು ಕರೆಯಲಾಗುತ್ತಿರುವ ಒಪ್ಪಂದದ ಹೊರತಾಗಿಯೂ ಅವರ ಸಂಕಷ್ಟ ಮುಂದುವರಿದಿದೆ" ಎಂದು ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಪ್ರಧಾನ ಕಾರ್ಯದರ್ಶಿ ಆಗ್ನೆಸ್ ಕ್ಯಾಲಮಾರ್ಡ್ ಹೇಳಿದ್ದಾರೆ.

2025ರ ಅಕ್ಟೋಬರ್‌ ನಲ್ಲಿ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಏರ್ಪಟ್ಟ ಬಳಿಕವೂ ಗಾಝಾದಲ್ಲಿ ಫೆಲೆಸ್ತೀನಿಯನ್ನರ ವಿರುದ್ಧ ಇಸ್ರೇಲ್ ನರಮೇಧವನ್ನು ಮುಂದುವರಿಸಿದೆ ಎಂದು ಅವರು ಆರೋಪಿಸಿದ್ದಾರೆ.

"ಗಾಝಾದಲ್ಲಿ ಫೆಲೆಸ್ತೀನಿಯನ್ನರ ದೈಹಿಕ ವಿನಾಶಕ್ಕೆ ಕಾರಣವಾಗಬಲ್ಲ ಜೀವನ ಪರಿಸ್ಥಿತಿಗಳನ್ನು ಇಸ್ರೇಲ್ ಉದ್ದೇಶಪೂರ್ವಕವಾಗಿ ಹೇರುತ್ತಿದೆ. ಇದರಿಂದ ಅವರಿಗೆ ಗಂಭೀರ ದೈಹಿಕ ಮತ್ತು ಮಾನಸಿಕ ಹಾನಿ ಉಂಟಾಗುತ್ತಿದೆ. ಕದನ ವಿರಾಮದ ಬಳಿಕವೂ ಇಂತಹ ಪರಿಸ್ಥಿತಿಗಳನ್ನು ಮುಂದುವರಿಸುವ ಮೂಲಕ ಇಸ್ರೇಲ್ ನರಮೇಧವನ್ನು ಮುಂದುವರಿಸುತ್ತಿದೆ ಎಂಬುದನ್ನು ನಮ್ಮ ವರದಿ ಮತ್ತಷ್ಟು ಸ್ಪಷ್ಟಪಡಿಸುತ್ತದೆ" ಎಂದು ಕ್ಯಾಲಮಾರ್ಡ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ
ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ

ಇರ್ಷಾದ್ ಎಂ. ವೇಣೂರು ಅವರು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ 13 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ‘ವಾರ್ತಾಭಾರತಿ’ಯಲ್ಲಿ ಡಿಜಿಟಲ್ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಡೆಕ್ಕನ್ ಹೆರಾಲ್ಡ್–ಪ್ರಜಾವಾಣಿ’ ಸಮೂಹದಲ್ಲಿ ಫೋಟೊ ಜರ್ನಲಿಸ್ಟ್ ಆಗಿಯೂ ಕೆಲಸ ಮಾಡಿದ್ದಾರೆ. ಅಂತರರಾಷ್ಟ್ರೀಯ ವಿದ್ಯಮಾನಗಳು, ಮಧ್ಯಪ್ರಾಚ್ಯದ ಸಂಘರ್ಷಗಳು, ಗಲ್ಫ್ ರಾಷ್ಟ್ರಗಳ ಬೆಳವಣಿಗೆಗಳು, ರಾಜಕೀಯ, ವಾಯುಯಾನ, ಅಪರಾಧ ಮತ್ತು ಕ್ರೀಡೆ ಅವರ ಆಸಕ್ತಿಯ ಸುದ್ದಿ ಕ್ಷೇತ್ರಗಳಾಗಿವೆ.

Next Story
X