ಪಶ್ಚಿಮದಂಡೆ: ಇಸ್ರೇಲಿ ಪಡೆಯಿಂದ ಇಬ್ಬರು ಮಹಿಳೆಯರ ಹತ್ಯೆ

ಸಾಂದರ್ಭಿಕ ಚಿತ್ರ
ಗಾಝಾ: ಆಕ್ರಮಿತ ಪಶ್ಚಿಮದಂಡೆಯಲ್ಲಿ ಇಸ್ರೇಲಿ ಪಡೆಗಳು ರವಿವಾರ ಗರ್ಭಿಣಿ ಸೇರಿದಂತೆ ಇಬ್ಬರು ಮಹಿಳೆಯರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ಫೆಲೆಸ್ತೀನ್ ಆರೋಗ್ಯ ಸಚಿವಾಲಯ ಹೇಳಿದೆ.
ಮೊದಲ ದಾಳಿಯಲ್ಲಿ ಮಹಿಳೆ ಸಾವನ್ನಪ್ಪಿದ್ದು ಆಕೆಯ ಪತಿ ಗಾಯಗೊಂಡಿದ್ದಾರೆ. ಮತ್ತೊಂದು ದಾಳಿಯಲ್ಲಿ ಗಂಭೀರ ಗಾಯಗೊಂಡ 8 ತಿಂಗಳ ಗರ್ಭಿಣಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಲು ಇಸ್ರೇಲ್ ಸೇನೆ ತಡೆಯೊಡ್ಡಿದ್ದರಿಂದ ಮಹಿಳೆ ಮೃತಪಟ್ಟಿದ್ದು ಹೊಟ್ಟೆಯಲ್ಲಿರುವ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿಕೆ ತಿಳಿಸಿದೆ. ಪಶ್ಚಿಮದಂಡೆಯ ತುಲ್ಕಾರೆಮ್ ಹೊರವಲಯದಲ್ಲಿರುವ ನೂರ್ ಶಾಮ್ಸ್ ನಿರಾಶ್ರಿತರ ಶಿಬಿರ ಪ್ರದೇಶದಲ್ಲಿ ಸಕ್ರಿಯವಾಗಿರುವ ಭಯೋತ್ಪಾದಕರನ್ನು ಗುರಿಯಾಗಿಸಿ ರವಿವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ.
Next Story





