ಚೀನಾ: ಗಮನ ಸೆಳೆದ ಪ್ರಧಾನಿ ಮೋದಿ, ಪುಟಿನ್, ಕ್ಸಿ ಜಿನ್ ಪಿಂಗ್ ಭೇಟಿ

Photo credit: X/@narendramodi
ತಿಯಾಂಜಿನ್: ಶಾಂಘೈ ಕೋ-ಆಪರೇಷನ್ ಆರ್ಗನೈಸೇಷನ್ ಶೃಂಗಸಭೆಯ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ, ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹಾಗೂ ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಜಾಗತಿಕ ಗಮನ ಸೆಳೆದಿದ್ದು, ವಿಡಿಯೋ ವೈರಲ್ ಆಗಿದೆ.
ಶಾಂಘೈ ಕೋ-ಆಪರೇಷನ್ ಆರ್ಗನೈಸೇಷನ್ ಶೃಂಗಸಭೆಯ ಎರಡನೇ ದಿನವಾದ ಸೋಮವಾರದಂದು ಮೂವರೂ ನಾಯಕರು ಪರಸ್ಪರರ ವಿಚಾರಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೂ ಈ ಚಿತ್ರವನ್ನು ಹಂಚಿಕೊಂಡಿದ್ದು, ಮತ್ತೊಂದು ಪೋಸ್ಟ್ ನಲ್ಲಿ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ರನ್ನು ತಾವು ಆಲಂಗಿಸಿಕೊಂಡಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. “ಪುಟಿನ್ ರನ್ನು ಭೇಟಿ ಮಾಡುವುದು ಸದಾ ಕಾಲ ಸಂತಸದ ಸಂಗತಿ” ಎಂದು ಆ ಚಿತ್ರಕ್ಕೆ ಶೀರ್ಷಿಕೆ ನೀಡಿದ್ದಾರೆ.
ಭಾರತದ ಉತ್ಪನ್ನಗಳ ಮೇಲೆ ಅಮೆರಿಕ ಹೆಚ್ಚುವರಿ ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಶಾಂಘೈ ಕೋ-ಆಪರೇಷನ್ ಆರ್ಗನೈಸೇಷನ್ ಶೃಂಗಸಭೆಯಲ್ಲಿ ಭಾರತ, ರಶ್ಯ ಹಾಗೂ ಚೀನಾದ ನಾಯಕರು ಪರಸ್ಪರ ಭೇಟಿಯಾಗಿರುವುದು ಮಹತ್ವ ಪಡೆದುಕೊಂಡಿದೆ.
Interactions in Tianjin continue! Exchanging perspectives with President Putin and President Xi during the SCO Summit. pic.twitter.com/K1eKVoHCvv
— Narendra Modi (@narendramodi) September 1, 2025







