Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. Yemen | ಸನಾ ವಿಮಾನ ನಿಲ್ದಾಣದ ಬಳಿ ಸೌದಿ...

Yemen | ಸನಾ ವಿಮಾನ ನಿಲ್ದಾಣದ ಬಳಿ ಸೌದಿ ಪಡೆಗಳಿಂದ ವಾಯುದಾಳಿ

ರಿಯಾದ್‌ ನಲ್ಲಿ ಹೂತಿಗಳ ಡ್ರೋನ್ ದಾಳಿ ಬೆನ್ನಲ್ಲೇ ಮಿಲಿಟರಿ ಕಾರ್ಯಾಚರಣೆ ಚುರುಕು

ವಾರ್ತಾಭಾರತಿವಾರ್ತಾಭಾರತಿಇರ್ಷಾದ್ ಎಂ. ವೇಣೂರು/ವಾರ್ತಾಭಾರತಿಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ25 Nov 2026 7:29 AM IST
share
Yemen | ಸನಾ ವಿಮಾನ ನಿಲ್ದಾಣದ ಬಳಿ ಸೌದಿ ಪಡೆಗಳಿಂದ ವಾಯುದಾಳಿ

ಸನಾ, ನ.25: ಯೆಮೆನ್ ರಾಜಧಾನಿ ಸನಾದಲ್ಲಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಸೌದಿ ನೇತೃತ್ವದ ಪಡೆಗಳು ಹಲವು ವಾಯುದಾಳಿಗಳನ್ನು ನಡೆಸಿವೆ ಎಂದು ಹೂತಿ ಪರ ಮಾಧ್ಯಮ ಅಲ್ ಮಸೀರಾ ಟಿವಿ ಬುಧವಾರ ವರದಿ ಮಾಡಿದೆ.

ವಿಮಾನ ನಿಲ್ದಾಣದ ಸಮೀಪ ಸರಣಿ ವಾಯುದಾಳಿಗಳು ನಡೆದಿದ್ದು, ಪ್ರಬಲ ಸ್ಫೋಟಗಳ ಸದ್ದು ಕೇಳಿಬಂದಿದೆ. ಸ್ಫೋಟದ ತೀವ್ರತೆಗೆ ಸಮೀಪದ ಮನೆಗಳ ಕಿಟಕಿಗಳೂ ಕಂಪಿಸಿದವು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಆದರೆ, ದಾಳಿಗಳಿಂದ ಸಂಭವಿಸಿರುವ ಸಾವು-ನೋವು ಅಥವಾ ಆಸ್ತಿಪಾಸ್ತಿ ಹಾನಿಯ ಕುರಿತು ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇದಕ್ಕೂ ಮುನ್ನ ಮಂಗಳವಾರ ಸೌದಿ ರಾಜಧಾನಿ ರಿಯಾದ್‌ ನ ಕಿಂಗ್ ಅಬ್ದುಲ್ಲಾ ಹಣಕಾಸು ಜಿಲ್ಲೆ (KAFD)ಯಲ್ಲಿರುವ ಸೌದಿ ಸಾರ್ವಜನಿಕ ಹೂಡಿಕೆ ನಿಧಿಯ (PIF) ಕೇಂದ್ರ ಕಚೇರಿ ಹೊಂದಿರುವ ಗಗನಚುಂಬಿ ಕಟ್ಟಡದ ಮೇಲೆ ಹೂತಿಗಳು ಡ್ರೋನ್ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ ಎಂದು ಸೌದಿ ನಾಗರಿಕ ರಕ್ಷಣಾ ಇಲಾಖೆ ತಿಳಿಸಿತ್ತು ಎಂದು ರಾಯಿಟರ್ಸ್ ವರದಿ ಮಾಡಿದೆ. ಗಾಯಗೊಂಡವರಲ್ಲಿ ಇಬ್ಬರು ಸೌದಿ ಪ್ರಜೆಗಳು, ಇಬ್ಬರು ಭಾರತೀಯರು, ಮೂವರು ನೇಪಾಳಿಗಳು ಹಾಗೂ ನಾಲ್ವರು ಈಜಿಪ್ಟ್ ಪ್ರಜೆಗಳು ಸೇರಿದ್ದಾರೆ.

ಡ್ರೋನ್ ಮೂಲಕ ಈ ದಾಳಿ ನಡೆಸಲಾಗಿದೆ ಎಂದು ಯೆಮೆನ್‌ ನಲ್ಲಿನ ಸೌದಿ ನೇತೃತ್ವದ ಮೈತ್ರಿಕೂಟದ ವಕ್ತಾರ ಮೇಜರ್ ಜನರಲ್ ತುರ್ಕಿ ಅಲ್ ಮಾಲಿಕಿ ತಿಳಿಸಿದ್ದಾರೆ. ನಾಗರಿಕರು ಮತ್ತು ನಾಗರಿಕ ಆಸ್ತಿಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿರುವುದಕ್ಕೆ ನಿರ್ಣಾಯಕ ಪ್ರತಿಕ್ರಿಯೆ ನೀಡುವುದಾಗಿ ಅವರು ಎಚ್ಚರಿಕೆ ನೀಡಿದ್ದರು.

ಇದೇ ವೇಳೆ, ಕೆಂಪು ಸಮುದ್ರ ತೀರದ ಹೂತಿ ನಿಯಂತ್ರಿತ ಹುದೈದಾ ಬಂದರಿನ ನಿರ್ದಿಷ್ಟ ಪ್ರದೇಶಗಳಿಂದ ನಾಗರಿಕರು ಸ್ಥಳಾಂತರಗೊಳ್ಳುವಂತೆ ಸೌದಿ ನೇತೃತ್ವದ ಮೈತ್ರಿಕೂಟ ಮಂಗಳವಾರ ಎಚ್ಚರಿಕೆ ನೀಡಿತ್ತು. ಮೈತ್ರಿಕೂಟದ ವಕ್ತಾರ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಸಂದೇಶ ಪ್ರಕಟಿಸಿದ್ದರು. ಉತ್ತರ ಯೆಮೆನ್‌ ಗೆ ಆಹಾರ ಮತ್ತು ಇತರ ಅಗತ್ಯ ಸಾಮಗ್ರಿಗಳನ್ನು ಪೂರೈಸುವ ಪ್ರಮುಖ ಪ್ರವೇಶದ್ವಾರವಾಗಿರುವ ಹುದೈದಾ ಬಂದರಿನ ಮೇಲೂ ಬುಧವಾರ ಮೈತ್ರಿಕೂಟ ವಾಯುದಾಳಿ ನಡೆಸಿದೆ ಎಂದು Times of India ವರದಿ ಮಾಡಿದೆ.

ಹುದೈದಾ ಬಂದರಿನ ಮೇಲಿನ ದಾಳಿಗೆ ಪ್ರತಿಯಾಗಿ ಸೌದಿ ಅರೇಬಿಯಾದ ಕೆಂಪು ಸಮುದ್ರ ತೀರದ ಬಂದರುಗಳನ್ನು ಗುರಿಯಾಗಿಸುವುದಾಗಿ ಹೂತಿಗಳು ಎಚ್ಚರಿಕೆ ನೀಡಿದ್ದರು. ತಮ್ಮ ಹಡಗುಗಳನ್ನು ಬಂದರುಗಳಿಂದ ತೆರವುಗೊಳಿಸುವಂತೆಯೂ ಹಡಗು ಕಂಪೆನಿಗಳಿಗೆ ಸೂಚಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ
ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ

ಇರ್ಷಾದ್ ಎಂ. ವೇಣೂರು ಅವರು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ 13 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ‘ವಾರ್ತಾಭಾರತಿ’ಯಲ್ಲಿ ಡಿಜಿಟಲ್ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಡೆಕ್ಕನ್ ಹೆರಾಲ್ಡ್–ಪ್ರಜಾವಾಣಿ’ ಸಮೂಹದಲ್ಲಿ ಫೋಟೊ ಜರ್ನಲಿಸ್ಟ್ ಆಗಿಯೂ ಕೆಲಸ ಮಾಡಿದ್ದಾರೆ. ಅಂತರರಾಷ್ಟ್ರೀಯ ವಿದ್ಯಮಾನಗಳು, ಮಧ್ಯಪ್ರಾಚ್ಯದ ಸಂಘರ್ಷಗಳು, ಗಲ್ಫ್ ರಾಷ್ಟ್ರಗಳ ಬೆಳವಣಿಗೆಗಳು, ರಾಜಕೀಯ, ವಾಯುಯಾನ, ಅಪರಾಧ ಮತ್ತು ಕ್ರೀಡೆ ಅವರ ಆಸಕ್ತಿಯ ಸುದ್ದಿ ಕ್ಷೇತ್ರಗಳಾಗಿವೆ.

Next Story
X