ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆಯನ್ನು ಎತ್ತಿಹಿಡಿಯಬೇಕು: ಎಸ್. ಜೈಶಂಕರ್

ಎಸ್. ಜೈಶಂಕರ್ | PC :PTI
ಬೀಜಿಂಗ್, ಜು.14: ಬೀಜಿಂಗ್ ನಲ್ಲಿ ನಡೆಯಲಿರುವ ಎಸ್ಸಿಒ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೋಮವಾರ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಈ ಸಂದರ್ಭ ಭಯೋತ್ಪಾದನೆ ವಿರುದ್ಧ ಭಾರತದ ಅಚಲ ನಿಲುವನ್ನು ಒತ್ತಿಹೇಳಿದ್ದಾರೆ.
ಉಭಯ ದೇಶಗಳ ನಡುವೆ ವಿಶಾಲ ಜಗತ್ತಿಗೆ ಪ್ರಯೋಜನವಾಗುವ ಸ್ಥಿರ, ರಚನಾತ್ಮಕ ಸಂಬಂಧಗಳ ಅಗತ್ಯವನ್ನು ಪ್ರತಿಪಾದಿಸಿದ ಜೈಶಂಕರ್ `ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ಉಗ್ರವಾದವನ್ನು ಎದುರಿಸುವುದು ಶಾಂಘೈ ಸಹಕಾರ ಸಂಘಟನೆ(ಎಸ್ಸಿಒ)ಯ ಪ್ರಾಥಮಿಕ ಉದ್ದೇಶವಾಗಿದೆ. ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆಯನ್ನು ಬಲವಾಗಿ ಎತ್ತಿಹಿಡಿಯಲಾಗುವುದು ಎಂದು ಭಾರತ ಆಶಿಸುತ್ತದೆ' ಎಂದು ಹೇಳಿದರು.
ಅಭಿವೃದ್ಧಿ ಹೊಂದುತ್ತಿರುವ ಎರಡು ಪ್ರಮುಖ ದೇಶಗಳಾಗಿರುವ ಚೀನಾ ಮತ್ತು ಭಾರತ ಜಾಗತಿಕ ದಕ್ಷಿಣದ ಪ್ರಮುಖ ಸದಸ್ಯರಾಗಿವೆ ಎಂದು ಚೀನಾದ ವಿದೇಶಾಂಗ ಇಲಾಖೆ ಹೇಳಿಕೆ ನೀಡಿದೆ.
Next Story





