Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರ್ಕಾರ ಬೀಳಿಸಿ ಶಾಸಕರನ್ನು ವಿಮಾನದಲ್ಲಿ...

ಸರ್ಕಾರ ಬೀಳಿಸಿ ಶಾಸಕರನ್ನು ವಿಮಾನದಲ್ಲಿ ಸುತ್ತಾಡಿಸಿದ ಬಿಜೆಪಿಗೆ, ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ಇದೆಯೇ?: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ22 Dec 2023 5:51 PM IST
share
ಸರ್ಕಾರ ಬೀಳಿಸಿ ಶಾಸಕರನ್ನು ವಿಮಾನದಲ್ಲಿ ಸುತ್ತಾಡಿಸಿದ ಬಿಜೆಪಿಗೆ, ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ಇದೆಯೇ?: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ಸುತ್ತಾಡಿಸಿದ ಬಿಜೆಪಿಗೆ, ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಈ ಶುಕ್ರವಾರ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, "ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ" ಎಂದು ಹೇಳಿದ್ದಾರೆ.

ʼರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇʼ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‍‌ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ ಎಂದು ತಿಳಿಸಿದರು.

ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ.…

— Siddaramaiah (@siddaramaiah) December 22, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X