Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗೂಂಡಾಗಿರಿ ಮಾಡಿ‌ ದಕ್ಷಿಣ ಕನ್ನಡ...

ಗೂಂಡಾಗಿರಿ ಮಾಡಿ‌ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತರೋದು ಸರಿಯಲ್ಲ: ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ26 Jan 2025 12:06 PM IST
share
ಗೂಂಡಾಗಿರಿ ಮಾಡಿ‌ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತರೋದು ಸರಿಯಲ್ಲ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು : ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಏನಾದರೂ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೆ ಪೊಲೀಸರ ಗಮನಕ್ಕೆ ತರಬೇಕು. ಈ ರೀತಿ ಗೂಂಡಾಗಿರಿ ಮಾಡಿ‌ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತರೋದು ಸರಿಯಲ್ಲ ಎಂದು ಸಲೂನ್‌ ಮೇಲಿನ ರಾಮ ಸೇನೆ ಕಾರ್ಯಕರ್ತರ ದಾಳಿ ಪ್ರಕರಣದ ಬಗ್ಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಘಟನೆಗಳು ನಡೆದಾಗ ಬಂಡವಾಳ ಹೂಡಿಕೆ, ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದರ ಮೇಲೆ ಪರಿಣಾಮ ಬೀಳುತ್ತದೆ. ಬಂಡವಾಳ ಹೂಡುವವರು ಇಲ್ಲಿ ಸುರಕ್ಷತೆ ಇದೆಯಾ ಎಂದು ಕೇಳುತ್ತಾರೆ. ಇತ್ತೀಚೆಗೆ ಬೆಂಗಳೂರಿಗೆ ಬಂದ ಬಂಡವಾಳ ಹೂಡಿಕೆದಾರರು ಕೇಳಿದ್ದ ಒಂದೇ ಪ್ರಶ್ನೆ ಇಲ್ಲಿ ಸುರಕ್ಷತೆ ಇದ್ಯಾ ? ಎಂದು. ರಾಮ್ ಸೇನೆಯಾಗಲಿ, ಶ್ರೀರಾಮ ಸೇನೆ ಇರಲಿ ಈ ರೀತಿ ಮಾಡೋದು ಖಂಡಿತ ಸರಿಯಲ್ಲ. ಅವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಆಗುತ್ತೆ. ಇಂತಹವರ ವಿರುದ್ಧ ಎಲ್ಲರೂ ಧ್ವನಿ‌ ಎತ್ತುವ ಅವಶ್ಯಕತೆ ಇದೆ. ಕೆಲವರು ಈ ಘಟನೆಯನ್ನು ಇನ್ನೂ ಖಂಡಿಸಿಲ್ಲ ಎಂದರು.

ಕೋಟೆಕಾರು ಸಹಕಾರಿ ಬ್ಯಾಂಹ್ ದರೋಡೆ ಪ್ರಕರಣವನ್ನು ಅತೀ ಶೀಘ್ರದಲ್ಲೇ ಪೊಲೀಸರು ಭೇದಿಸಿದ್ದಾರೆ. ಇಂತಹ ಸಮಾಜಘಾತುಕ ಶಕ್ತಿಗಳನ್ನ ನಿಯಂತ್ರಿಸುವುದು, ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವುದು ಸರ್ಕಾರದ ಕರ್ತವ್ಯ. ಈ ಪ್ರಕರಣವನ್ನು ಕೇವಲ ನಾಲ್ಕು ದಿನದಲ್ಲಿ ಭೇದಿಸಿ ಎಲ್ಲಾ‌ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಬ್ಯಾಂಕ್ ಗಳು ಹಾಗೂ ಹಣಕಾಸು ಸಂಸ್ಥೆಗಳು ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು. ಸುರಕ್ಷತೆಯ ಬಗ್ಗೆ ಎಲ್ಲಾ ಹಣಕಾಸು ಸಂಸ್ಥೆಗಳಿಗೆ ಸುರಕ್ಷತೆಯ ಮಾರ್ಗಸೂಚಿ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಈ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ? ಹಿಂದಿರುವವರು ಯಾರು ?ಎಲ್ಲವನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ ಎಂದು ತಿಳಿಸಿದರು.

ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಇದರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ. ಒಬ್ಬರು ಸಿಎಂ ಇರುವಾಗ ಇನ್ನೊಬ್ಬರು ಸಿಎಂ ಆಗುವ ಪ್ರಶ್ನೆ ಬರೋದಿಲ್ಲ. ಈ ಬಗ್ಗೆ ಏನೇ ಇದ್ರೂ ವರಿಷ್ಠರು ತೀರ್ಮಾನ ತಗೋತಾರೆ. ಸಿದ್ದರಾಮಯ್ಯ ಎಲ್ಲರಿಗೂ 100% ಪರ್ಸೆಂಟ್ ವಿಶ್ವಾಸ ಇರೋ ನಾಯಕ ಎಂದರು.

ರಾಜ್ಯಪಾಲರ ಭಾಷಣದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಉಲ್ಲೇಖ ವಿಚಾರವಾಗಿ ಮಾತನಾಡಿದ ಅವರು, ದೇಶದಲ್ಲಿ ಯಾವುದೇ ಸರ್ಕಾರ ಕೊಟ್ಟ ಮಾತನ್ನ ಉಳಿಸಿಕೊಂಡಿಲ್ಲ. ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನ ಉಳಿಸಿಕೊಂಡು ನಾಲ್ಕೇ ತಿಂಗಳಲ್ಲಿ ಎಲ್ಲವನ್ನೂ ಅನುಷ್ಠಾನಗೊಳಿಸಿದೆ. ಎಷ್ಟೇ ಜನ ಟೀಕೆಗಳು ಮಾಡಿದ್ರೂ,ನಾವು ನಮ್ಮ ಬದ್ಧತೆಯನ್ನ ತೋರಿಸಿದ್ದೇವೆ. ಹೇಗ್ರಿ ಈ ಗ್ಯಾರಂಟಿಗಳನ್ನ ಅಷ್ಟು ಬೇಗ ಜಾರಿಗೆ ತಂದ್ರಿ ಎಂದು ಕೇಂದ್ರ ಸರ್ಕಾರದವರೇ ಕೇಳಿದ್ದಾರೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X