Kalaburagi | ಬಸವಣ್ಣನವರ ತತ್ವ ಯಾರೊಬ್ಬರ ಸ್ವತ್ತಲ್ಲ; ಧಾರ್ಮಿಕ ಸ್ವಾತಂತ್ರ್ಯ ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ: ಕಾಡಸಿದ್ದೇಶ್ವರ ಸ್ವಾಮೀಜಿ
ಬಸವಾದಿ ಶಿವಶರಣರ ಹಿಂದೂ ಸಮಾವೇಶ

ಕಲಬುರಗಿ : ಬಸವಣ್ಣನವರ ತತ್ವ ಹಾಗೂ ಶರಣರ ಪರಂಪರೆಯನ್ನು ಯಾರೊಬ್ಬರೂ ತಮ್ಮದೇ ಸ್ವತ್ತೆಂಬಂತೆ ಪ್ರತಿಪಾದಿಸಬಾರದು. ಸಂವಿಧಾನ ಪ್ರತಿಯೊಬ್ಬರಿಗೂ ಧಾರ್ಮಿಕ ಆಚರಣೆಯ ಸ್ವಾತಂತ್ರ್ಯ ನೀಡಿದ್ದು, ಮತ್ತೊಬ್ಬರ ಧಾರ್ಮಿಕ ಸ್ವಾತಂತ್ರ್ಯವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂದು ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ.
ನಗರದ ಎನ್.ವಿ. ಕಾಲೇಜು ಮೈದಾನದಲ್ಲಿ ರವಿವಾರ ಸಂಜೆ ನಡೆದ ಬಸವಾದಿ ಶಿವಶರಣರ ಹಿಂದೂ ಸಮಾವೇಶದ ನೇತೃತ್ವ ವಹಿಸಿ ಅವರು ಮಾತನಾಡಿದರು.
ಬಸವಾದಿ ಶರಣರ ಹೆಸರನ್ನು ತಮ್ಮದೇ ‘ಪೇಟೆಂಟ್’ ಎಂಬಂತೆ ಕೆಲವರು ಬಳಸಿಕೊಳ್ಳುತ್ತಿದ್ದಾರೆ. ಬಸವಣ್ಣನವರ ತತ್ವಗಳನ್ನು ಯಾರು ಎಷ್ಟರ ಮಟ್ಟಿಗೆ ಆಚರಣೆಯಲ್ಲಿ ಅಳವಡಿಸಿಕೊಂಡಿದ್ದಾರೆ ಎಂಬುದನ್ನು ಪ್ರಶ್ನಿಸಬೇಕಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.
ಕಾರ್ಯಕ್ರಮದಲ್ಲಿ ಬೀದರ್‌ನ ಶಿವಕುಮಾರ ಸ್ವಾಮಿ, ಸವಿತಾನಂದ ಸ್ವಾಮಿ, ಮುಚಳಂಬದ ಪ್ರಣವಾನಂದ ಸ್ವಾಮಿ ಮಾತನಾಡಿದರು. ಚಂದು ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಬೀದರ್‌ನ ಶಿವಕುಮಾರ ಸ್ವಾಮಿ, ಕಡಗಂಚಿಯ ವೀರಭದ್ರ ಶಿವಾಚಾರ್ಯ, ಹವಾ ಮಲ್ಲಿನಾಥ ಸ್ವಾಮಿ, ಪ್ರಣವಾನಂದ ಸ್ವಾಮಿ, ಯಳಸಂಗಿ ಸಿದ್ಧಾರೂಢ ಮಠದ ಪರಮಾನಂದ ಸ್ವಾಮಿ, ಅಪ್ಪಾರಾವ ದೇವಿಮುತ್ಯ, ಅಕ್ಕಮಹಾದೇವಿ, ಮಾಜಿ ಸಂಸದ ಉಮೇಶ್ ಜಾಧವ್, ಅವಿನಾಶ್ ಜಾಧವ್, ಬಸವರಾಜ ಮತ್ತಿಮಡು, ಬಿ.ಜಿ. ಪಾಟೀಲ್, ರಾಜಕುಮಾರ್ ಪಾಟೀಲ್ ತೇಲ್ಕೂರ್, ಹರ್ಷಾನಂದ ಗುತ್ತೇದಾರ್, ಶಶೀಲ್ ನಮೋಶಿ, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ದತ್ತಾತ್ರೇಯ ಪಾಟೀಲ್ ರೇವೂರ ಮತ್ತಿತರರು ಉಪಸ್ಥಿತರಿದ್ದರು.






