Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ...

ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಕ್ಯಾತನಾಳ

ವಾರ್ತಾಭಾರತಿವಾರ್ತಾಭಾರತಿ21 Aug 2025 11:48 AM IST
share
ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಕ್ಯಾತನಾಳ
ಕಲಬುರಗಿ: ವಿಶ್ವ ಸೊಳ್ಳೆಗಳ ದಿನಾಚರಣೆ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ಡೆಂಗಿ, ಚಿಕುನ್ ಗುನ್ಯಾ, ಆನೆಕಾಲು ರೋಗ, ಮಲೇರಿಯಾ ಹಾಗೂ ಮೆದುಳು ಜ್ವರದಂತಹ ರೋಗಗಳ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮದ ಭಾಗವಾಗಿ ಜನರಲ್ಲಿ ಜಾಗೃತಿ ಮಾಡುವುದು ಅತ್ಯವಶ್ಯಕ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ಹೇಳಿದ್ದಾರೆ.

ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸೊಳ್ಳೆಗಳ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಅವರು, ಆರೋಗ್ಯ ವಲಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಪ್ರತೀ ವರ್ಷ ಹಲವಾರು ರೋಗಗಳ ಕುರಿತು ಜನಜಾಗೃತಿ ಮೂಡಿಸಲು ದಿನಾಚರಣೆಗಳನ್ನು ಆಚರಿಸಿ ಬರುವಂತಹ ಪರಿಪಾಠಗಳನ್ನು ಬೆಳೆಸಿಕೊಂಡು ಬಂದಿದೆ. ಇಲಾಖೆಯ ಸಿಬ್ಬಂದಿಯವರು ಸಾರ್ವಜನಿಕರ ಸಹಯೋಗದೊಂದಿಗೆ ಜನ ಸಮುದಾಯದಲ್ಲಿ ಮಲೇರಿಯಾದಂತಹ ಮಾರಕ ರೋಗವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮ ಹಾಕಿದ್ದಾರೆ ಎಂದು ಶ್ಲಾಘಿಸಿದರು.




ಮಳೆಗಾಲದ ಸಂದರ್ಭದಲ್ಲಿ ಅತೀ ಹೆಚ್ಚು ಪ್ರಸರಣ ಹೊಂದುತ್ತಿರುವ ಡೆಂಗಿ ರೋಗವನ್ನು ಕೂಡಾ ನಿಯಂತ್ರಣ ತರುವಲ್ಲಿ ಸಾರ್ವಜನಿಕರ ಸಹಯೋಗ ಕೂಡಾ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟರು.

ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಸಂತಾನೋತ್ಪತ್ತಿ ಹಾಗೂ ಮಕ್ಕಳ ಆರೋಗ್ಯ ಅಧಿಕಾರಿ ಡಾ.ಸಿದ್ದು ಪಾಟೀಲ ಮಾತನಾಡಿ, ಬ್ರಿಟಿಷ್ ಭಾರತದಲ್ಲಿ ವೈದ್ಯಾಧಿಕಾರಿಯಾಗಿದ್ದ ಸರ್. ರೋನಾಲ್ಡ್ ರಾಸ್ ಸೊಳ್ಳೆಗಳಿಂದ ಅದೂ ವಿಶೇಷವಾಗಿ ಅನಾಫಿಲಿಸ್ ಹೆಣ್ಣು ಸೊಳ್ಳೆಯಿಂದ ಮಲೇರಿಯಾ ರೋಗವೂ ಹರಡುತ್ತದೆ ಎಂದು ಇಡೀ ಜಗತ್ತಿಗೆ ತೋರಿಸಿಕೊಟ್ಟರು. ಈ ದೇಶದ ಸಿಕಂದ್ರಾಬಾದ್ ಹಾಗೂ ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಹಲವಾರು ಸೊಳ್ಳೆಗಳನ್ನು ಅಧ್ಯಯನ ಮಾಡಿ ಅಗಸ್ಟ್ 20, 1897ರಂದು ಪತ್ತೆಹಚ್ಚಿರುವ ಈ ಸಂಶೋಧನೆ ಶ್ಲಾಘನೀಯ ಎಂದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ಕಾರ್ಯಕ್ರಮ ಅಧಿಕಾರಿ ಡಾ.ಶಿವಶರಣಪ್ಪ ಭೂಸನೂರ ಮಾತನಾಡಿ, ಸೊಳ್ಳೆಗಳು ಮಳೆಗಾಲದಲ್ಲಿ ಅಷ್ಟೇ ಅಲ್ಲ ವರ್ಷದುದ್ದಕ್ಕೂ ತಮ್ಮ ಸಂತಾನೋತ್ಪತ್ತಿ ಮಾಡುತ್ತಿದ್ದು, ಹೀಗಾಗಿ ಇತ್ತೀಚಿನ ದಿನಗಳಲ್ಲಿ ವರ್ಷದುದ್ದಕ್ಕೂ ಡೆಂಗಿ ಹಾಗೂ ಚಿಕುನ್ ಗುನ್ಯಾ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಇಲಾಖೆಯ ಸಿಬ್ಬಂದಿ ಸಾರ್ವಜನಿಕರ ಸಹಕಾರವನ್ನು ತೆಗೆದುಕೊಂಡು ಜನಜಾಗೃತಿಯನ್ನು ಮೂಡಿಸುವುದು ಜೊತೆಗೆ ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ನಿರ್ಮೂಲನೆ ಮಾಡಬೇಕಾಗಿದೆ ಎಂದರು.

ಜಿಲ್ಲಾ ಕಾಲರಾ ನಿಯಂತ್ರಣ ಅಧಿಕಾರಿ ಡಾ.ವಿವೇಕಾನಂದ ರೆಡ್ಡಿ ಮಾತನಾಡಿ, ಶಾಲಾ ಮಟ್ಟದಲ್ಲಿ ಈಗಾಗಲೇ ಇಲಾಖೆಯ ಸಿಬ್ಬಂದಿ ಹೋಗಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ, ಮುಂದಿನ ದಿನಗಳ ಸುಮುದಾಯದತ್ತ ತೆರಳಿ ಸ್ವಸಹಾಯ ಗುಂಪಿನ ಸಹಾಯ ಹಾಗೂ ಸಂಘಸಂಸ್ಥೆಗಳ ಸಹಕಾರ ಪಡೆದು ಸಾಮಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಸಮುದಾಯದ ಪಾತ್ರ ಕುರಿತು ವಿವರಣೆ ನೀಡಿದರೆ ಸಾಂಕ್ರಾಮಿಕ ರೋಗ ರಹಿತ ಸಮಾಜವನ್ನಾಗಿ ನಿರ್ಮಾಣ ಮಾಡಬಹುದು ಎಂದರು.

ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಅಧಿಕಾರಿ ಡಾ.ಶಿವಶರಣಪ್ಪ ಮೂಳೆಗಾಂವ್ ಮಾತನಾಡಿದರು.

ಜಿಲ್ಲಾ ಕೀಟಶಾಸ್ತಜ್ಞ ಚಾಮರಾಜ ದೊಡಮನಿ ಕಾರ್ಯಕ್ರಮ ನಿರೂಪಿಸಿದರು. ಸಮಾಲೋಚಕ ಕಾರ್ಣಿಕ ಕೋರೆ ವಂದಿಸಿದರು.

ಕಾರ್ಯಕ್ರಮದಲ್ಲಿ ಇಲಾಖೆಯ ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X