ಕಲಬುರಗಿ | ಕಲ್ಲಿನಿಂದ ಜಜ್ಜಿ ಯುವಕನ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕಲಬುರಗಿ: ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದ ಶ್ರೀಮಂತ ರಾವ್(32) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಶಿವಕುಮಾರ್, ಶ್ರೀಕಾಂತ್ ಹಾಗೂ ಸುದೀಪ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀಮಂತ ರಾವ್
ಶ್ರೀಮಂತ ರಾವ್(32) ರನ್ನು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಹಳೆಯ ವೈಷಮ್ಯದಿಂದ ದುಷ್ಕರ್ಮಿಗಳು ಈ ಕೊಲೆ ನಡೆಸಿದ್ದಾರೆನ್ನಲಾಗಿದ್ದು, ಈ ಕುರಿತು ವಿಶ್ವವಿದ್ಯಾನಿಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Next Story





