ಸೇಡಂ | ತಹಶೀಲ್ದಾರ್ ಕಚೇರಿ ಸಹಿತ ವಿವಿಧ ಸರಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಸೇಡಂ: ನಗರದ ಬಿಇಓ ಕಚೇರಿ, ತಹಶೀಲ್ದಾರ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ ಸೇರಿದಂತೆ ಇಲ್ಲಿನ ವಿವಿಧ ಸರಕಾರಿ ಇಲಾಖೆಗಳ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ನಾಲ್ಕು ತಂಡಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿವೆ.
ಬೆಂಗಳೂರು ಲೋಕಾಯುಕ್ತ ಬಿ.ಎಸ್.ಪಾಟೀಲ್, ಡಿವೈಎಸ್ಪಿಯವರ ಆದೇಶದಂತೆ ಡಾ.ಬಸವರಾಜ ಮಗದೂಡ ಅವರ ನೇತೃತ್ವದಲ್ಲಿ ಬೆಳಗ್ಗೆ ದಾಳಿ ನಡೆದಿದೆ.
ಈ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿ, ಪೊಲೀಸರು, ಸಿಬ್ಬಂದಿಯವರು ಇದ್ದರು.
Next Story





