Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ: ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ...

ಆಳಂದ: ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಯಳಸಂಗಿಯಲ್ಲಿ ರಸ್ತೆ ಚಳವಳಿ

ವಾರ್ತಾಭಾರತಿವಾರ್ತಾಭಾರತಿ5 Oct 2026 10:35 PM IST
share
ಆಳಂದ: ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಯಳಸಂಗಿಯಲ್ಲಿ ರಸ್ತೆ ಚಳವಳಿ

ಆಳಂದ: ತಾಲೂಕಿನ ಯಳಸಂಗಿ ಗ್ರಾಮದಲ್ಲಿ ಉಲ್ಬಣಿಸಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಸೋಮವಾರ ಸುಮಾರು 10 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಬೆಳಗ್ಗೆ 6ರಿಂದ ಸಂಜೆ 4ರವರೆಗೆ ಸ್ವಾಮಿ ವಿವೇಕಾನಂದ ಕ್ರಾಸ್ ಸಮೀಪ ನಿಂಬರ್ಗಾ–ನಿಂಬಾಳ ಹಾಗೂ ಯಳಸಂಗಿ–ಆಳಂದ ಮಾರ್ಗದಲ್ಲಿ ಮಹಿಳೆಯರು ಖಾಲಿ ಕೊಡಗಳೊಂದಿಗೆ ಬಿಸಿಲಿನಲ್ಲೇ ಕುಳಿತು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮೌಖಿಕ ಹಾಗೂ ಲಿಖಿತ ಮನವಿ ಸಲ್ಲಿಸಿದ್ದರೂ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶಗೊಂಡರು. ಈ ಹಿಂದೆ ಎರಡು ಬಾರಿ ಪ್ರತಿಭಟನೆ ನಡೆಸಿದ್ದರೂ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಸೋಮವಾರ ರಸ್ತೆ ಚಳವಳಿ ನಡೆಸಲಾಯಿತು.

ಮಧ್ಯಾಹ್ನ 2ರ ಸುಮಾರಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ನೋಡಲ್ ಅಧಿಕಾರಿ ಡಾ. ಯಲ್ಲಪ್ಪ ಇಂಗಳೆ ಹಾಗೂ ಗ್ರಾ.ಪಂ. ಪಿಡಿಒ ಶಿವಾನಂದ ಹಡಪದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಶೀಘ್ರ ಬಗೆಹರಿಸುವ ಭರವಸೆ ನೀಡಿದರು. ಆದರೆ ಪ್ರತಿಭಟನಾಕಾರರು, “ಮೊದಲು ನೀರು ಕೊಡಿ, ನಂತರ ಮಾತನಾಡಿ” ಎಂದು ಪಟ್ಟು ಹಿಡಿದರು.

ಸ್ಥಳದಲ್ಲಿಯೇ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಗ್ರಾಮದ ಐದು ಕೊಳವೆಬಾವಿಗಳನ್ನು ಸ್ವಚ್ಛಗೊಳಿಸುವುದು, ಹೊಸ ಪೈಪ್‌ಲೈನ್ ಅಳವಡಿಸುವುದು, ಹಳೆಯ ಪೈಪ್‌ಲೈನ್ ದುರಸ್ತಿ, ಹಡಲಗಿ ಬಾವಿಯ ಪಂಪ್‌ಸೆಟ್‌ಗೆ ಕೇಬಲ್ ಅಳವಡಿಕೆ ಹಾಗೂ ತಾಂಡಾ ಸಮೀಪದ ಎರಡು ಕೊಳವೆಬಾವಿಗಳನ್ನು ಸ್ವಚ್ಛಗೊಳಿಸಿ ಪೈಪ್‌ಲೈನ್ ಸಂಪರ್ಕ ಕಲ್ಪಿಸುವಂತೆ ಸೂಚಿಸಲಾಯಿತು. ಅನಧಿಕೃತವಾಗಿ ಮನೆಗಳಿಗೆ ಮಾಡಿಕೊಂಡಿರುವ ನಳ ಸಂಪರ್ಕಗಳನ್ನು ಕೂಡಲೇ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಲಾಯಿತು.

ಸಂಜೆ 4 ಗಂಟೆಗೆ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ರಸ್ತೆ ತಡೆ ಹಿನ್ನೆಲೆಯಲ್ಲಿ ಆಳಂದ, ನಿಂಬಾಳ, ಮಾದನ ಹಿಪ್ಪರಗಾ, ನಿಂಬರ್ಗಾ ಹಾಗೂ ಕಲಬುರಗಿಗೆ ಸಂಚರಿಸುವ ಸಾರಿಗೆ ಬಸ್‌ಗಳು ಸೇರಿದಂತೆ ವಾಹನ ಸಂಚಾರಕ್ಕೆ ಅಡಚಣೆಯಾಗಿ ಸಾರ್ವಜನಿಕರು ಪರದಾಡುವಂತಾಯಿತು.

ಭೀಮಣ್ಣ ಎಂ. ಶಿವಪೂರೆ, ಸಾತಲಿಂಗಯ್ಯ ಮಠಪತಿ, ವಿಜಯಕುಮಾರ ಮೇತ್ರೆ, ರಾಜಶೇಖರ ಸಾವಳೆ, ಮಂಜುನಾಥ ಅಕ್ಕಲಕೋಟ, ಶರೀಫಾ ನದಾಫ್, ಕಲ್ಲವ್ವ ಬಸಗೋಂಡ, ಲಕ್ಷ್ಮೀಬಾಯಿ ಅವಟೆ, ಅಂಬಿಕಾ ಕಲಾಲ, ಜುಬಾ ಗೊಲ್ಲರ, ಮಹಾದೇವಿ ಅಕ್ಕಲಕೋಟ, ಸಿದ್ಧರಾಮ ಅವಟೆ, ಶಿವಪುತ್ರ ಯಲ್ದೆ, ಶಾಂತಗೌಡ ಪಾಟೀಲ್, ಪುತಳಾಬಾಯಿ ಅವಟೆ, ಶಿವಲೀಲಾ, ನೀಲಮ್ಮ ಅವಟೆ ಸೇರಿದಂತೆ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X