Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯಲ್ಲಿ 12ನೇ ರಾಜ್ಯಮಟ್ಟದ ಕದಳಿ...

ಕಲಬುರಗಿಯಲ್ಲಿ 12ನೇ ರಾಜ್ಯಮಟ್ಟದ ಕದಳಿ ಮಹಿಳಾ ಸಮಾವೇಶ : ಡಾ.‌ಶಾಂತಾ ಅಸ್ಟಿಗೆ

ವಾರ್ತಾಭಾರತಿವಾರ್ತಾಭಾರತಿ24 Oct 2024 10:35 PM IST
share
ಕಲಬುರಗಿಯಲ್ಲಿ 12ನೇ ರಾಜ್ಯಮಟ್ಟದ ಕದಳಿ ಮಹಿಳಾ ಸಮಾವೇಶ : ಡಾ.‌ಶಾಂತಾ ಅಸ್ಟಿಗೆ

ಕಲಬುರಗಿ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆ ವತಿಯಿಂದ ಶನಿವಾರದಿಂದ ಎರಡು ದಿನಗಳ ಕಾಲ 12ನೇ ರಾಜ್ಯ ಮಟ್ಟದ ಕದಳಿ ಮಹಿಳಾ ಸಮಾವೇಶ ನಡೆಯಲಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ನ ಹಿರಿಯ ಉಪಾಧ್ಯಕ್ಷ ಅಪ್ಪಾರಾವ ಅಕ್ಕೋಣೆ ಹಾಗೂ ಕದಳಿ ವೇದಿಕೆಯ ಜಿಲ್ಲಾಧ್ಯಕ್ಷೆ ಡಾ.‌ಶಾಂತಾ ಅಸ್ಟಿಗೆ ತಿಳಿಸಿದರು.

ನಗರದ ಜೈಭವಾನಿ ಭವನದಲ್ಲಿ ಗುರುವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಸಾಹಿತಿ ಡಾ.ಮೀನಾಕ್ಷಿ ಬಾಳಿ ಸರ್ವಾಧ್ಯಕ್ಷತೆಯಲ್ಲಿ ಅ.26, 27ರಂದು ಸಮಾವೇಶ ಜರುಗಲಿದ್ದು, ಸಮಾವೇಶಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯದ 30 ಜಿಲ್ಲೆಗಳಿಂದ ಸುಮಾರು 600 ಪ್ರತಿನಿಧಿಗಳು ಹಾಗೂ ಸ್ಥಳೀಯವಾಗಿ 400 ಜನ ಸೇರಿದಂತೆ 1000ಕ್ಕೂ ಹೆಚ್ಚು ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಜಯನಗರದ ಅನುಭವ ಮಂಟಪದಿಂದ ಜೈಭವಾನಿ ಕನ್ವನ್ಷನ್ ಹಾಲ್ ವರೆಗೆ ವಚನಗಳ ಕಟ್ಟು ಹಾಗೂ ಅಕ್ಕಮಹಾದೇವಿ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ವಚನ ಕಲಾಕೃತಿಗಳ ಪ್ರದರ್ಶನ ಮತ್ತು ಪುಸ್ತಕ ಮಳಿಗೆಗಳ ಉದ್ಘಾಟನೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ನೆರವೇರಿಸಲಿದ್ದಾರೆ ಎಂದರು.

ಶನಿವಾರ ಬೆಳಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಶರಣಬಸವೇಶ್ವರ ಸಂಸ್ಥಾನದ ಚೇರ್ ಪರ್ಸನ್ ಡಾ.ದಾಕ್ಷಾಯಿಣಿ ಶರಣಬಸಪ್ಪ ಉದ್ಘಾಟಿಸಲಿದ್ದಾರೆ. ಮೈಸೂರಿನ ಸುತ್ತೂರು ಶಿವರಾತ್ರಿ ದೇಶಿಕಕೇಂದ್ರ ಮಹಾಸ್ವಾಮಿಗಳು, ಗದಗನ ಡಾ.ಜಗದ್ಗುರು ತೋಂಟದ ಸಿದ್ಧರಾಮ ಸ್ವಾಮಿಗಳು, ಸುಲಫಲಮಠ ಹಾಗೂ ಶ್ರೀಶೈಲಂ ಸಾರಂಗಮಠದ ಡಾ.ಜಗದ್ಗುರು ಸಾರಂಗಧರ ದೇಶಿಕೇಂದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕಲ್ಯಾಣ ಕದಳಿ, ಅಕ್ಕ ಕೇಳವ್ವ ಎಂಬ ಎರಡು ಸ್ಮರಣ ಸಂಚಿಕೆ, ಶರಣ ಪ್ರಸಾದ, 63 ಪುರಾತನರ ಚಿತ್ರಪಟಗಳು, ವಚನ ನಿದರ್ಶನ, ಜಡದಲ್ಲಿ ಜಂಗಮ ಸೇರಿ ಒಟ್ಟು 6 ಕೃತಿಗಳು ಬಿಡುಗಡೆಯಾಗಲಿವೆ ಎಂದರು.

ಜಿಲ್ಲಾಧ್ಯಕ್ಷೆ ಡಾ.‌ಮಲ್ಲಿಕಾರ್ಜುನ ವಡ್ಡನಕೇರಿ, ಪ್ರಧಾನ ಕಾರ್ಯದರ್ಶಿ ಶಾಂತಲಿಂಗ ಪಾಟೀಲ ಕೋಳಕೂರ, ಜಯಶ್ರೀ ಚಟ್ನಳ್ಳಿ, ಬಸವರಾಜ ಮೊರಬದ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X