ಕಲಬುರಗಿ | ವಿದ್ಯುತ್ ಶಾರ್ಟ್ ಸರ್ಕ್ಯೂರ್ಟ್: 3 ಎಕರೆ ಕಬ್ಬು ಬೆಂಕಿಗಾಹುತಿ

ಅಫಜಲಪುರ: ತಾಲೂಕಿನ ಹಿಂಚಗೇರಾ ಗ್ರಾಮದ ವ್ಯಾಪ್ತಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ, ಭಾಗವ್ವ ಅಡಿವೆಪ್ಪ ಸುತಾರ ಎಂಬವರಿಗೆ ಸೇರಿದ ಮೂರು ಎಕರೆ ಕಬ್ಬು ಬೆಳೆ ನಾಶವಾಗಿದೆ.
ಈ ಅಗ್ನಿ ಅವಘಡದಿಂದ ರೈತ ಕುಟುಂಬಕ್ಕೆ ಸುಮಾರು ಆರು ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತ ಕುಟುಂಬಕ್ಕೆ ಸರ್ಕಾರ ತಕ್ಷಣ ಸೂಕ್ತ ಪರಿಹಾರ ಒದಗಿಸಬೇಕು ಎಂದು ಯುವ ರೈತ ಮುಖಂಡ ಕಾಳಪ್ಪ ಸುತಾರ ಮನವಿ ಮಾಡಿದ್ದಾರೆ.
Next Story




