Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸರಣಿ ಕಳ್ಳತನ ಪ್ರಕರಣದ...

ಕಲಬುರಗಿ | ಸರಣಿ ಕಳ್ಳತನ ಪ್ರಕರಣದ ಆರೋಪಿಯ ಬಂಧನ: 4.40 ಲಕ್ಷ ರೂ. ಮೌಲ್ಯದ ನಗ-ನಗದು ವಶ

ವಾರ್ತಾಭಾರತಿವಾರ್ತಾಭಾರತಿ15 May 2025 3:49 PM IST
share
ಕಲಬುರಗಿ | ಸರಣಿ ಕಳ್ಳತನ ಪ್ರಕರಣದ ಆರೋಪಿಯ ಬಂಧನ: 4.40 ಲಕ್ಷ ರೂ. ಮೌಲ್ಯದ ನಗ-ನಗದು ವಶ

ಕಲಬುರಗಿ: ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11 ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

ಗುರುವಾರ ಜಿಲ್ಲಾ ಪೊಲೀಸ್ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಝಾಮ ಗೇಟ್ ವಾಡಿ ನಿವಾಸಿ ಶೇಖ್ ಪಾಶ ಬಂಧಿತ ಆರೋಪಿ. ಈತನಿಂದ 4,40,400 ರೂ. ಮೌಲ್ಯದ ಬೆಳ್ಳಿ-ಚಿನ್ನದ ಆಭರಣಗಳು ಹಾಗೂ ನಗದು ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಈ ಹಿಂದೆ ಇದೇ ಪ್ರಕರಣದಲ್ಲಿ ನಾಲವಾರ ನಿವಾಸಿಗಳಾದ ಸಿದ್ದೀಕ್ ಮತ್ತು ಉಬೇದ್ ಎಂಬವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಆಗಿರುವ ಶೇಖ್ ಪಾಶ ಕಳೆದ 11 ತಿಂಗಳಿಂದ ಮಹಾರಾಷ್ಟ್ರದ ಪುನಾ, ಬಾಂಬೆ ಸೇರಿದಂತೆ ಮತ್ತಿತರ ನಗರಗಳಲ್ಲಿ ತನ್ನ ವಾಸ ಸ್ಥಳವನ್ನು ಬದಲಾಯಿಸುತ್ತಾ ತಲೆಮರೆಸಿಕೊಂಡಿದ್ದ. ಈತನನ್ನು ಬಂಧಿಸಲು ತನಿಖಾ ತಂಡಗಳನ್ನು ರಚಿಸಲಾಗಿತ್ತು. ಕೊನೆಗೆ ಆರೋಪಿಯನ್ನು ವಶಕ್ಕೆ ಪಡೆದು ಕಳ್ಳತನವಾಗಿದ್ದ 4,40,400 ರೂ. ಮೌಲ್ಯದ ಬೆಳ್ಳಿ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಜಪ್ತಿ ಮಾಡುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣನವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿ.ಪಿ.ಐ.ಚಂದ್ರಶೇಖರ್ ತಿಗಡಿ, ಪಿಎಸ್ಸೈಗಳಾದ ಶ್ರೀಶೈಲ್ ಅಂಬಾಟಿ ಚಂದ್ರಮಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X