Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ನಾರಾಯಣಪುರ ಜಲಾಶಯದಿಂದ ಭೀಮಾ ನದಿಗೆ 1...

ನಾರಾಯಣಪುರ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ26 March 2024 7:57 PM IST
share
ನಾರಾಯಣಪುರ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಾರಾಯಣಪುರ ಜಲಾಶಯದಿಂದ ಸೊನ್ನ ಬ್ಯಾರೇಜಿಗೆ 1 ಟಿಎಂಸಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಲಬುರಗಿ ಜಿಲ್ಲೆ ಭೀಕರ ಬರಗಾಲದ ಪರಿಸ್ಥಿತಿ ಎದುರಿಸುತ್ತಿದ್ದು, ಪ್ರಮುಖ ನದಿಯಾದ ಭೀಮಾ ನದಿಯಲ್ಲಿ ನೀರಿನ ಕೊರತೆಯಾಗಿದೆ. ಇದರಿಂದಾಗಿ ಜಿಲ್ಲೆಯ ಭೀಮಾ ತೀರದ ಗ್ರಾಮಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆಎದುರಾಗಿತ್ತು. ಈ ಕುರಿತು ಮಾನ್ಯ ಉಪಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಭೀಮಾ ನದಿಗೆ ನೀರುವ ಬಿಡುವ ಅವಶ್ಯಕತೆಗಳ ಕುರಿತಂತೆ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೆ. ಈ ನಡುವೆ ಶಾಸಕರಾದ ಎಂ.ವೈ.ಪಾಟೀಲ ಅವರೂ ಕೂಡಾ ಮಾನ್ಯ ಉಪಮುಖ್ಯಮಂತ್ರಿಗಳನ್ನು ಭೇಟಿಯಾಗಿ ಭೀಮಾ ತೀರದ ಗ್ರಾಮಗಳಲ್ಲಿನ ಕುಡಿಯುವ ನೀರಿನ ಬವಣೆ ಹಾಗೂ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅವಶ್ಯಕತೆಯನ್ನು ಚರ್ಚಿಸಿದ್ದರು.

ಪರಿಣಾಮವಾಗಿ, ಸರ್ಕಾರದ ನಿರ್ದೇಶನದಂತೆ ಕಲಬುರಗಿ ಪ್ರಾದೇಶಿಕ ಆಯುಕ್ತರು ನಾರಾಯಣಪುರ ಜಲಾಶಯದಿಂದ ಸಂಬಂಧಿಸಿದ ಕಾಲುವೆಗಳ ಮೂಲಕ ಭೀಮಾ ನದಿಯ ಸೊನ್ನ ಬ್ಯಾರೇಜಿಗೆ 1 ಟಿಎಂಸಿ ನೀರು ಹರಿಸುವಂತೆ ಅದೇಶ ಹೊರಡಿಸಿದ್ದಾರೆ. ಸತತ ಪರಿಶ್ರಮ ಹಾಗೂ ಸ್ಥಳೀಯ ಶಾಸಕರ ಒತ್ತಾಸೆಯಿಂದಾಗಿ ಭೀಮಾ ನದಿಗೆ ನೀರು ಹರಿಸುವಂತೆ ಆದೇಶಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಜೊತೆಗೆ ಮಹಾರಾಷ್ಟ್ರ ದ ಉಜನಿ ಜಲಾಶಯದಿಂದಲೂ ಕೂಡಾ ಭೀಮಾ ನದಿಗೆ ನೀರು ಹರಿಸುವಂತೆ ಅಲ್ಲಿನ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ. ಆದರೆ ಪತ್ರಕ್ಕೆ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಆದರೂ ಕೂಡಾ ಸರ್ಕಾರದ ಮಟ್ಟದಲ್ಲಿ ಇನ್ನೂ ಒತ್ತಡ ಹೇರಲಾಗುತ್ತಿದೆ ಎಂದು ಖರ್ಗೆ ಅವರ ತಿಳಿಸಿದ್ದಾರೆ.

ಈಗ ಭೀಮಾ ನದಿಗೆ ಬಿಟ್ಟಿರುವ ನೀರನ್ನು ಕೇವಲ ಕುಡಿಯಲು ಮಾತ್ರ ಬಳಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿರುವ ಸಚಿವರು, ಕೃಷಿ ಚಟುವಟಿಕೆಗಳಿಗೆ ನೀರು ಬಳಸದಂತೆ ಅವರು ಮತ್ತೊಮ್ಮೆ ರೈತಬಾಂಧವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X