Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೇವರ್ಗಿ ಕ್ಷೇತ್ರದ ಕರಡು ಮತದಾರರ...

ಜೇವರ್ಗಿ ಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿ 2.15 ಲಕ್ಷ ಮತದಾರರು

ವಾರ್ತಾಭಾರತಿವಾರ್ತಾಭಾರತಿ25 Aug 2026 9:48 PM IST
share
ಜೇವರ್ಗಿ ಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿ 2.15 ಲಕ್ಷ ಮತದಾರರು

ಜೇವರ್ಗಿ: ಜೇವರ್ಗಿ ವಿಧಾನಸಭಾ ಮತಕ್ಷೇತ್ರದ ವಿಶೇಷ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 2,15,846 ಮತದಾರರು ಇದ್ದಾರೆ ಎಂದು ಮತದಾರರ ನೋಂದಣಿ ಅಧಿಕಾರಿ ಮಾರುತಿ ಬ್ಯಾಕೋಡ್ ತಿಳಿಸಿದರು.

ಜೇವರ್ಗಿ ತಹಸೀಲ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರದಲ್ಲಿ 279 ಮತಗಟ್ಟೆಗಳಿದ್ದು, 1,30,626 ಪುರುಷರು, 1,28,415 ಮಹಿಳೆಯರು ಹಾಗೂ 20 ಇತರೆ ಮತದಾರರು ಸೇರಿದಂತೆ ಒಟ್ಟು 2,59,061 ಮತದಾರರಿದ್ದರು. ಪರಿಷ್ಕರಣೆಯ ಬಳಿಕ ಮತಗಟ್ಟೆಗಳ ಸಂಖ್ಯೆ 285ಕ್ಕೆ ಏರಿಕೆಯಾಗಿದ್ದು, ಕರಡು ಪಟ್ಟಿಯಲ್ಲಿ 1,10,580 ಪುರುಷರು, 1,05,253 ಮಹಿಳೆಯರು ಹಾಗೂ 13 ಇತರೆ ಮತದಾರರು ಇದ್ದಾರೆ ಎಂದು ಹೇಳಿದರು.

ವಿಶೇಷ ಸಮಗ್ರ ಪರಿಷ್ಕರಣೆ-2026ರ ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 24ರಂದು ಎಲ್ಲ ಮತಗಟ್ಟೆಗಳು ಹಾಗೂ ತಹಸೀಲ್ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದರು.

ಪರಿಷ್ಕರಣೆ ವೇಳೆ ಒಟ್ಟು 43,215 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ 9,688 ಮಂದಿ ಮೃತಪಟ್ಟವರು, 2,271 ಮಂದಿ ಗೈರುಹಾಜರಾಗಿರುವವರು, 27,235 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು ಹಾಗೂ 3,903 ಮಂದಿ ದ್ವಿಪ್ರತಿ ಮತದಾರರ ಗುರುತಿನ ಚೀಟಿ ಹೊಂದಿರುವವರು ಎಂದು ಗುರುತಿಸಲಾಗಿದೆ. ಇನ್ನು 118 ಮತದಾರರ ಹೆಸರುಗಳನ್ನು ಇತರೆ ಕಾರಣಗಳಿಂದ ಕೈಬಿಡಲಾಗಿದೆ ಎಂದು ಮಾರುತಿ ಬ್ಯಾಕೋಡ್ ವಿವರಿಸಿದರು.

ಹೆಸರು ಬದಲಾವಣೆ, 2022ರ ಮತದಾರರ ಪಟ್ಟಿಯ ಮಾಹಿತಿ ಲಭ್ಯವಿಲ್ಲದಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಸುಮಾರು 8,122 ಮತದಾರರಿಗೆ ನೋಟಿಸ್ ಜಾರಿ ಮಾಡುವುದು ಬಾಕಿ ಇದೆ. ಅವರಿಗೆ ಮೂರು ಬಾರಿ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು. ಸೂಕ್ತ ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸುವವರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಉಳಿಸಲಾಗುವುದು. ಅಗತ್ಯ ದಾಖಲೆಗಳನ್ನು ಸಲ್ಲಿಸದಿದ್ದಲ್ಲಿ ನಿಯಮಾನುಸಾರ ಹೆಸರು ಕೈಬಿಡಲಾಗುವುದು ಎಂದು ಹೇಳಿದರು.

ಸೆ.23ರವರೆಗೆ ಹಕ್ಕು–ಆಕ್ಷೇಪಣೆ ಸಲ್ಲಿಕೆಗೆ ಅವಕಾಶ :

ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಮತದಾರರು ಕರಡು ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 24ರಿಂದ ಅಕ್ಟೋಬರ್ 22ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳ ವಿಚಾರಣೆ ನಡೆಯಲಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಪಟ್ಟಣ ಪ್ರದೇಶದಲ್ಲಿ ತಹಸೀಲ್ ಕಚೇರಿ, ಪುರಸಭೆ ಮತ್ತು ಇತರೆ ಸರ್ಕಾರಿ ಕಟ್ಟಡಗಳಲ್ಲಿ ವಿಚಾರಣೆಗೆ ಸ್ಥಳಗಳನ್ನು ಗುರುತಿಸಲಾಗಿದೆ. ಮತದಾರರ ವಿಚಾರಣೆ ನಡೆಸಲು ತಾಲೂಕು ಮಟ್ಟದಲ್ಲಿ 8 ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಸ್ವೀಕೃತವಾಗುವ ಎಲ್ಲ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಿದ ಬಳಿಕ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಮಾರುತಿ ಬ್ಯಾಕೋಡ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜೇವರ್ಗಿ ತಹಸೀಲ್ದಾರ್ ಅಂಜುಮಾ ತಬಸ್ಸುಮ್ ಹಾಗೂ ಯಡ್ರಾಮಿ ತಹಸೀಲ್ದಾರ್ ಯಲ್ಲಪ್ಪ ಸುಭೇದಾರ್ ಉಪಸ್ಥಿತರಿದ್ದರು.

Tags

Jewargi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X