Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ರಾಜ್ಯದಲ್ಲಿ ಶೀಘ್ರದಲ್ಲೇ 750 ನೂತನ...

ರಾಜ್ಯದಲ್ಲಿ ಶೀಘ್ರದಲ್ಲೇ 750 ನೂತನ ಅಂಬ್ಯುಲೆನ್ಸ್‌ಗಳ ಸೇವೆ : ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ28 Oct 2026 4:35 PM IST
share
ರಾಜ್ಯದಲ್ಲಿ ಶೀಘ್ರದಲ್ಲೇ 750 ನೂತನ ಅಂಬ್ಯುಲೆನ್ಸ್‌ಗಳ ಸೇವೆ : ಸಚಿವ ಯು.ಟಿ.ಖಾದರ್

ಕಲಬುರಗಿ : ಗ್ರಾಮೀಣ ಪ್ರದೇಶದ ಜನರಿಗೆ ತ್ವರಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ರಾಜ್ಯದಲ್ಲಿ ಶೀಘ್ರದಲ್ಲೇ 750 ನೂತನ ಅಂಬ್ಯುಲೆನ್ಸ್‌ಗಳನ್ನು ಸೇವೆಗೆ ನಿಯೋಜಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಸಚಿವ ಯು.ಟಿ.ಖಾದರ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಡಿಸೆಂಬರ್ ಒಳಗಾಗಿ ಸುಧಾರಿತ ಅಂಬ್ಯುಲೆನ್ಸ್ ಸೇವೆ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ. ನಿಗದಿತ 20 ನಿಮಿಷಗಳೊಳಗೆ ಅಂಬ್ಯುಲೆನ್ಸ್ ತಲುಪದಿದ್ದರೆ ಸಂಬಂಧಿಸಿದವರಿಗೆ ದಂಡ ವಿಧಿಸುವ ವ್ಯವಸ್ಥೆಯನ್ನೂ ಜಾರಿಗೆ ತರಲಾಗುವುದು ಎಂದರು.

ಗ್ರಾಮೀಣ ಪ್ರದೇಶಗಳಲ್ಲೇ ತುರ್ತು ಚಿಕಿತ್ಸೆ ದೊರೆಯುವಂತಾಗಲು ಪ್ರತಿ ತಾಲೂಕಿನಲ್ಲಿ ಐದು ಹಾಸಿಗೆಗಳ ಐಸಿಯು ಘಟಕಗಳನ್ನು ನಿರ್ಮಿಸಿ ಅಭಿವೃದ್ಧಿಪಡಿಸಲಾಗುವುದು. ಇದರಿಂದ ಜಿಲ್ಲಾಮಟ್ಟದ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ನರ್ಸ್‌ಗಳ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಸುಮಾರು ಒಂದು ಸಾವಿರ ವೈದ್ಯರು ಹಾಗೂ ನರ್ಸ್‌ಗಳನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಎಂಬಿಬಿಎಸ್ ವೈದ್ಯರಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಆಸ್ಪತ್ರೆಗಳಲ್ಲಿ ಪೂರ್ಣಾವಧಿ ವೈದ್ಯರ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪ್ರತ್ಯೇಕ ಮಹಿಳಾ ಆರೋಗ್ಯ ನೀತಿ :

ಉತ್ತಮ ಆರೋಗ್ಯ ಸೇವೆ ಎಂದರೆ ಹೆಚ್ಚು ಆಸ್ಪತ್ರೆಗಳನ್ನು ನಿರ್ಮಿಸುವುದಷ್ಟೇ ಅಲ್ಲ. ಜನರು ಅನಾರೋಗ್ಯಕ್ಕೆ ಒಳಗಾಗದಂತೆ ತಡೆಗಟ್ಟುವ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವುದು ಮುಖ್ಯ. ಮಾನಸಿಕ ಆರೋಗ್ಯ, ಉಚಿತ ದಂತ ಚಿಕಿತ್ಸೆ, ಮಹಿಳೆಯರ ಆರೋಗ್ಯ ಹಾಗೂ ತಾಯಿ-ಮಗುವಿನ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪ್ರತ್ಯೇಕ ಮಹಿಳಾ ಆರೋಗ್ಯ ನೀತಿಯನ್ನು ಜಾರಿಗೆ ತಂದು ಈ ಕ್ಷೇತ್ರಕ್ಕೆ ಮತ್ತಷ್ಟು ಒತ್ತು ನೀಡಲಾಗುವುದು ಎಂದು ಸಚಿವರು ಹೇಳಿದರು.

ಆಹಾರ ಮತ್ತು ಔಷಧಿಗಳ ಗುಣಮಟ್ಟದ ತಪಾಸಣೆ ಮುಂದುವರಿಸಲಾಗುವುದು. ಕ್ಯಾನ್ಸರ್, ಕಿಡ್ನಿ ಸೇರಿದಂತೆ ವಿವಿಧ ಗಂಭೀರ ಕಾಯಿಲೆಗಳಿಗೆ ಬಳಸುವ ಔಷಧಿಗಳ ಬೆಲೆ ಹೆಚ್ಚಳವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. 147 ಔಷಧಿಗಳ ಬೆಲೆ ನಿಗದಿತ ಮಿತಿಯೊಳಗೆ ಇರುವಂತೆ ನೋಡಿಕೊಳ್ಳಲಾಗುವುದು ಎಂದರು.

ಅಲ್ಪಸಂಖ್ಯಾತರ ಕಲ್ಯಾಣಕ್ಕೆ 4,600 ಕೋಟಿ ರೂ. ಅನುದಾನ :

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸರ್ಕಾರ 4,600 ಕೋಟಿ ರೂ. ಅನುದಾನ ಒದಗಿಸಿದೆ. ಮೊರಾರ್ಜಿ ದೇಸಾಯಿ, ಮೌಲಾನಾ ಅಬುಲ್ ಕಲಾಂ ಆಜಾದ್ ಹಾಗೂ ಶಿಶುನಾಳ ಶರೀಫ್ ಸೇರಿದಂತೆ ವಿವಿಧ ವಸತಿ ಶಿಕ್ಷಣ ಸಂಸ್ಥೆಗಳ ಮೂಲಕ ಸುಮಾರು 3.5 ಲಕ್ಷ ವಿದ್ಯಾರ್ಥಿಗಳು ಉಚಿತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಯು.ಟಿ. ಖಾದರ್ ತಿಳಿಸಿದರು.

ಇಂಜಿನಿಯರಿಂಗ್, ಎಂ.ಟೆಕ್, ಬಿಸಿಎ ಸೇರಿದಂತೆ ಇತರೆ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಮೆರಿಟ್ ಹಾಗೂ ಬಿಪಿಎಲ್ ಕಾರ್ಡ್ ಆಧಾರದ ಮೇಲೆ ಲ್ಯಾಪ್‌ಟಾಪ್ ನೀಡಲು ತೀರ್ಮಾನಿಸಲಾಗಿದೆ. ಹೊಸದಾಗಿ 35 ವಸತಿ ಶಾಲೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ಅಲ್ಪಸಂಖ್ಯಾತರ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದರು.

ಹಜ್ ಯಾತ್ರೆಗೆ ಕಡಿಮೆ ವೆಚ್ಚದಲ್ಲಿ ಅವಕಾಶ :

ಹಜ್ ಯಾತ್ರೆಗೆ ಸಂಬಂಧಿಸಿದಂತೆ ಮುಂದಿನ ತಿಂಗಳಿನಿಂದ ಪ್ರತಿ ತಿಂಗಳು ಯಾತ್ರಿಕರು ಕಡಿಮೆ ವೆಚ್ಚದಲ್ಲಿ ಹಜ್ ಯಾತ್ರೆ ಕೈಗೊಳ್ಳಲು ಅವಕಾಶ ಕಲ್ಪಿಸುವ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.

ಅಫಜಲಪುರ ತಾಲೂಕಿನ ಗೊಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭ್ರಷ್ಟಾಚಾರದ ಕುರಿತು ತನಿಖೆ ನಡೆಯುತ್ತಿರುವ ಮಾಹಿತಿ ಇದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ಖಾದರ್ ತಿಳಿಸಿದರು.

ಗುಟ್ಕಾ, ನಿಕೋಟಿನ್ ಉತ್ಪನ್ನಗಳ ಅಕ್ರಮ ಮಾರಾಟಕ್ಕೆ ಕಡಿವಾಣ :

ರಾಜ್ಯದಲ್ಲಿ 2013ರಲ್ಲೇ ಗುಟ್ಕಾ ನಿಷೇಧಿಸಲಾಗಿದೆ. ನಿಕೋಟಿನ್ ಮಿಶ್ರಿತ ಪದಾರ್ಥಗಳ ಅಕ್ರಮ ಮಾರಾಟಕ್ಕೆ ಅವಕಾಶವಿಲ್ಲ. ಇಂತಹ ಉತ್ಪನ್ನಗಳ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಚುನಾವಣಾ ಫಲಿತಾಂಶ ಜನರ ತೀರ್ಪು :

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಸಚಿವ ಯು.ಟಿ. ಖಾದರ್, ಚುನಾವಣೆಗಳಲ್ಲಿ ಸೋಲು-ಗೆಲುವು ಸಹಜ. ಜನರ ತೀರ್ಪನ್ನು ಗೌರವಿಸುತ್ತೇವೆ. ಗೆಲುವಿನಿಂದ ಬೀಗುವ ಅಥವಾ ಸೋಲಿನಿಂದ ಕುಗ್ಗುವ ಅಗತ್ಯವಿಲ್ಲ. ಒಂದು ಸ್ಥಾನ ಮಾತ್ರ ನಮ್ಮದಾಗಿತ್ತು. ಅತಿಯಾದ ಆತ್ಮವಿಶ್ವಾಸದಿಂದ ಕೆಲವೊಮ್ಮೆ ಫಲಿತಾಂಶದಲ್ಲಿ ವ್ಯತ್ಯಾಸವಾಗಬಹುದು. ಪ್ರತಿ ಚುನಾವಣೆಯೂ ನಮಗೆ ಎಚ್ಚರಿಕೆಯ ಗಂಟೆಯಾಗಿದೆ. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಫಲಿತಾಂಶವನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ಕಾರ್ಯಕ್ರಮಗಳನ್ನು ರೂಪಿಸಲಿದ್ದಾರೆ ಎಂದರು.

ಬಿಜೆಪಿಯನ್ನು ನೋಡಿ ರಾಜಕೀಯ ಮಾಡುವುದಿಲ್ಲ. ಜನರ ಹಿತಕ್ಕಾಗಿ ಕೆಲಸ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಬಿಜೆಪಿಯವರು ಲಾಭಕ್ಕಾಗಿ ಯಾವುದೇ ಹಂತಕ್ಕೂ ಹೋಗಲು ಸಿದ್ಧರಾಗಿರುವ ಮನಸ್ಥಿತಿ ಹೊಂದಿದ್ದಾರೆ ಎಂದು ಸಚಿವರು ಆರೋಪಿಸಿದರು. ಗ್ಯಾರಂಟಿ ಯೋಜನೆಗಳಿಗೆ ಹಣವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿರುವ ಕುರಿತು ಪ್ರತಿಕ್ರಿಯಿಸಿದ ಖಾದರ್, ರಾಜ್ಯ ಸರ್ಕಾರ ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಥವಾಗಿ ಮುಂದುವರಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ರಹೀಮ್ ಖಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿರಣ್ ದೇಶಮುಖ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ, ಕುಡಾ ಅಧ್ಯಕ್ಷ ಮಝಾರ ಖಾನ್ ಆಲಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

U.T.KhaderKarnatakaambulances
share
ವಾರ್ತಾಭಾರತಿ
ವಾರ್ತಾಭಾರತಿ
Next Story
X