Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಎಸ್ಸೆಸೆಲ್ಸಿ ಪರೀಕ್ಷೆ :...

ಕಲಬುರಗಿ | ಎಸ್ಸೆಸೆಲ್ಸಿ ಪರೀಕ್ಷೆ : ವಸತಿ ಶಾಲೆಗಳಲ್ಲಿ ಶೇ. 98.24 ರಷ್ಟು ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ28 April 2026 8:40 PM IST
share
ಕಲಬುರಗಿ | ಎಸ್ಸೆಸೆಲ್ಸಿ ಪರೀಕ್ಷೆ : ವಸತಿ ಶಾಲೆಗಳಲ್ಲಿ ಶೇ. 98.24 ರಷ್ಟು ಫಲಿತಾಂಶ

ಕಲಬುರಗಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಅಡಿಯಲ್ಲಿರುವ ಕಲಬುರಗಿ ಜಿಲ್ಲೆಯ ವಸತಿ ಶಾಲೆಗಳು 2025-26 ನೇ ಸಾಲಿನ ಎಸ್ಸೆಸೆಲ್ಸಿ ವಾರ್ಷಿಕ ಪರೀಕ್ಷೆ-1 ರಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಒಟ್ಟಾರೆ ಶೇ. 98.24 ರಷ್ಟು ಫಲಿತಾಂಶ ದಾಖಲಿಸಿವೆ. ಇದರ ಪ್ರಯುಕ್ತ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರ ಮುಂದಿನ ಶೈಕ್ಷಣಿಕ ಅಭ್ಯಾಸಕ್ಕೆ ಶುಭ ಹಾರೈಸಿದ್ದಾರೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾಂಧಿ, ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಸೇರಿದಂತೆ ಒಟ್ಟು 43 ವಸತಿ ಶಾಲೆಗಳಲ್ಲಿ 27 ಶಾಲೆಗಳು ನೂರಕ್ಕೆ ನೂರು ಫಲಿತಾಂಶ ಪಡೆದಿವೆ. ಅಂಕಗಳಿಕೆಯಲ್ಲಿ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆ (521) ಕಲಬುರಗಿ ವಸತಿ ಶಾಲೆಯ ವಿದ್ಯಾರ್ಥಿಯಾದ ಭಾಗ್ಯಶ್ರಿ ದಯಾನಂದ 620 (ಶೇ. 99.20) ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಹೆಬ್ಬಾಳ ಮೊರಾರ್ಜಿ ದೇಸಾಯಿ (ಹಿಂ.ವ 313) ವಸತಿ ಶಾಲೆಯ ಶ್ವೆತಾ 619 (ಶೇ. 99.04) ರಷ್ಟು ಅಂಕ ಪಡೆದು ದ್ವಿತಿಯ ಸ್ಥಾನ ಪಡೆದಿದ್ದು, ಬಿಳವಾರ(ಇಜೇರಿ) ಡಾ.ಬಿ.ಆರ್ ಅಂಬೇಡ್ಕರ್ (ಪ.ಜಾ. 812) ವಸತಿ ಶಾಲೆಯ ಅಂಕಿತಾ 615 (ಶೇ. 98.40) ರಷ್ಟು ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ಫಲಿತಾಂಶಕ್ಕಾಗಿ ಶ್ರಮಿಸಿದ ವಸತಿ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಹಾಗೂ ಪ್ರಾಂಶುಪಾಲರಿಗೆ ಸಮಾಜ ಕಲ್ಯಾಣ ಇಲಾಖೆಯ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣಾ ಆಶಾಪೂರ್ ಹಾಗೂ ಜಿಲ್ಲಾ ಕ್ರೈಸ್ ಸಮನ್ವಯಾಧಿಕಾರಿ ನವೀದ್ ಅಂಜುಮ್ ಅಭಿನಂದಿಸಿದ್ದಾರೆ.

ಕ್ರೈಸ್ ವಸತಿ ಶಾಲೆಗಳಲ್ಲಿ ಅತ್ಯುತ್ತಮ ಬೋಧಕ ಸಿಬ್ಬಂದಿ ವರ್ಗ, ಉಚಿತ ಊಟ ವಸತಿ, ಪಠ್ಯಪುಸ್ತಕ, ಲೇಖನ ಸಾಮಗ್ರಿ, ಸಮವಸ್ತ್ರ ಸುಸಜ್ಜಿತ ಪ್ರಯೋಗಾಲಯ, ಕಂಪ್ಯೂಟರ್ ಮತ್ತು ಸಂಗಿತ ಶಿಕ್ಷಣ ಮುಂತಾದ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಪೋಷಕರು ವಸತಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸುವ ಮೂಲಕ ಅತ್ಯುತ್ತಮ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಪಡೆದುಕೊಳ್ಳಬೇಕೆಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರೀತಿ ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

KalaburagiSSLC
share
ವಾರ್ತಾಭಾರತಿ
ವಾರ್ತಾಭಾರತಿ
Next Story
X