ಕಲಬುರಗಿ ವಿಶ್ವವಿದ್ಯಾಲಯದ ರ್ಯಾಂಕ್ ಪಟ್ಟಿಯಲ್ಲಿ ಕಮಲಾಪುರ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಸಾವಿತ್ರಿ ದೊಶೆಟ್ಟಿ, ಕರುಣಾ ಕುಪೇಂದ್ರ
ಕಮಲಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು 2025-26ನೇ ಸಾಲಿನ ಕಲಬುರಗಿ ವಿಶ್ವವಿದ್ಯಾಲಯದ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಕಾಲೇಜಿನ ಸಮಾಜಶಾಸ್ತ್ರ ವಿಭಾಗದಲ್ಲಿ ಅಧ್ಯಯನ ಮಾಡಿದ ಸಾವಿತ್ರಿ ದೊಶೆಟ್ಟಿ ಅವರು ಶೇ. 75.6 ಅಂಕಗಳನ್ನು ಪಡೆದು ಕಲಬುರಗಿ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇದೇ ವಿಭಾಗದ ಕರುಣಾ ಕುಪೇಂದ್ರ ಅವರು ತೃತೀಯ ಸ್ಥಾನ ಹಾಗೂ ಭವಾನಿ ರಾಮರಾವ ಅವರು ನಾಲ್ಕನೇ ಸ್ಥಾನ ಪಡೆದಿದ್ದಾರೆ.
2025-26ನೇ ಸಾಲಿನ ಹಿಂದಿ ವಿಭಾಗದಲ್ಲಿ ಅಧ್ಯಯನ ಮಾಡಿದ ದೀಪಿಕಾ ಚವ್ಹಾಣ ಅವರು ಹಿಂದಿ ವಿಷಯದಲ್ಲಿ ಶೇ. 75.3 ಅಂಕಗಳನ್ನು ಪಡೆದು ಕಲಬುರಗಿ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಇದೇ ವಿಭಾಗದ ಅಮರನಾಥ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲರು ಚಿನ್ನದ ಪದಕ ನೀಡಿ ಗೌರವಿಸಲಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಡಾ. ಲಕ್ಷ್ಮಣ ಭೋಸ್ಲೆ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಗಿರೀಶ ಯಡ್ರಾಮಿ, ಹಿಂದಿ ವಿಭಾಗದ ಮುಖ್ಯಸ್ಥ ಲಕ್ಷ್ಮಣ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಅವಿನಾಶ ಕಠಿಕರ, ಡಾ. ಜಗದೇವಪ್ಪ ಧರಣಿ, ಡಾ. ಜ್ಯೋತಿ ಕಿರಣಗಿ, ಡಾ. ಅಂಬಣ್ಣ, ಸಿಬ್ಬಂದಿ ವರ್ಗದವರು ಹಾಗೂ ಅತಿಥಿ ಉಪನ್ಯಾಸಕರು ಅಭಿನಂದಿಸಿ ಶುಭ ಹಾರೈಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






