Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿ, 750...

ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿ, 750 ಸರ್ವೇಯರ್‌ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ24 Jun 2024 1:49 PM IST
share
ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿ, 750 ಸರ್ವೇಯರ್‌ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೃಷ್ಣ ಬೈರೇಗೌಡ

ಕಲಬುರಗಿ: ಪ್ರಸಕ್ತ ವರ್ಷ ಹೆಚ್ಚಿನ ಮಳೆ‌ ನಿರೀಕ್ಷೆ ಹಿನ್ನೆಲೆಯಲ್ಲಿ ಪ್ರವಾಹದಿಂದ ಆಗಬಹುದಾದ ಜನ-ಜಾನುವಾರಗಳ ಹಾನಿ ತಪ್ಪಿಸುವುದು ನಮ್ಮೆಲ್ಲರ‌ ಮೊದಲ ಆದ್ಯತೆಯಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸೋಮವಾರ ಡಿ.ಸಿ.ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, " ಪ್ರವಾಹದಿಂದ ಹಾನಿಯಾದ ನಂತರ ಪರಿಹಾರ ನೀಡುವುದು ನಮ್ಮ ಕರ್ತವ್ಯ. ಆದರೆ ಅಷ್ಟಕ್ಕೆ ನಮ್ಮ ಕೆಲಸ‌ ಸೀಮಿತವಲ್ಲ. ಬದಲಾಗಿ ಪ್ರವಾಹಕ್ಕೂ ಮುನ್ನ ಜನರ ರಕ್ಷಣೆ ಮಾಡಿ, ಯಾವುದೇ ಹಾನಿಯಾಗದಂತೆ ತಡೆಯುವುದು ಸರಕಾರರದ ಉದ್ದೇಶ. ಇದನ್ನರಿತು ಅಧಿಕಾರಿಗಳು ಕೆಲಸ‌ ಮಾಡಬೇಕು" ಎಂದರು.

ʼಕಂದಾಯ ಇಲಾಖೆ ಜನರಿಗೆ ಪೂರಕವಾಗಿ ಕೆಲಸ ಮಾಡಬೇಕೇ ಹೊರತು ಜನರ ಬದುಕಿಗೆ ಹೊರೆಯಾಗಬಾರದು. ಹಲವಾರು ಕಂದಾಯ ಪ್ರಕರಣಗಳಲ್ಲಿ ಜನರು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ.‌ಇವರನ್ನು ಸಮಸ್ಯೆಗಳಿಂದ ಹೊರತರಬೇಕಾದ ಕೆಲಸ ತಳ ಹಂತದ ಅಧಿಕಾರಿಗಳು ಮಾಡಬೇಕಿದೆʼ ಎಂದರು.

ಆಧಾರ್ ಸೀಡಿಂಗ್ ಜುಲೈ ಮಾಸಾಂತ್ಯಕ್ಕೆ ಡೆಡ್‌ ಲೈನ್:

ರಾಜ್ಯದಲ್ಲಿ 4 ಕೋಟಿ ಪಹಣಿಗಳಲ್ಲಿ ಈಗಾಗಲೇ 1.70 ಕೋಟಿ ಪಹಣಿಗೆ ಆಧಾರ್ ಸೀಡಿಂಗ್ ಆಗಿದೆ. ಉಳಿದಿದ್ದನ್ನು ಅಭಿಯಾನದ‌ ಮೂಲಕ ಜುಲೈ ಮಾಸಾಂತ್ಯಕ್ಕೆ ಪೂರ್ಣಗೊಳಿಸಬೇಕು. ಇದರಿಂದ ವಂಚನೆಗೆಗೆ ಒಳಗಾಗುವುದು ತಪ್ಪಲಿದೆ. ಜೊತೆಗೆ ಪರಿಹಾರ, ವರ್ಗಾವಣೆ ಪ್ರಕ್ರಿಯೆ ಸರಳವಾಗಲಿದೆ ಎಂದರು.

1000 ಗ್ರಾಮ ಲೆಕ್ಕಾಧಿಕಾರಿ, 750 ಸರ್ವೇಯರ್ ಭರ್ತಿಗೆ ಕ್ರಮ:

ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು, 750 ಸರ್ವೇಯರ್ ಹುದ್ದೆ ಭರ್ತಿಗೆ ಪ್ರಕಿಯೆ ನಡೆದಿದೆ. ಇದರ ಜೊತೆಗೆ 34 ಎ.ಡಿ.ಎಲ್.ಆರ್ ನೇಮಕಾತಿ ಸಹ ನಡೆದಿದೆ. ಇದರಿಂದ ಸರ್ವೇಯರ್ ಇಲಾಖೆಗೆ ಬಲ ಬರಲಿದೆ. ಇದನ್ನು‌ ಬಳಸಿಕೊಂಡು ಪ್ರಸ್ತುತ ಇರುವ 22 ಲಕ್ಷ ಮಲ್ಟಿ ಹೋಲ್ಡರ್ ಆರ್.ಟಿ.ಸಿ.ಗಳನ್ನು ಅವರವರಿಗೆ ಪ್ರತ್ಯೇಕವಾಗಿ ಪೋಡಿ ಮಾಡಿ, ಆರ್.ಟಿ.ಸಿ. ಮಾಡಿಸಿ ಕೊಡಬೇಕಾಗಿದೆ. ಇದಕ್ಕಾಗಿ ರೋಡ್ ಮ್ಯಾಪ್ ಸಿದ್ಧಗೊಳಿಸಲಾಗುತ್ತಿದೆ ಎಂದರು.

ಕಲುಷಿತ‌ ನೀರು ಪೂರೈಕೆಯಾಗಬಾರದು:

ಮಳೆಗಾಲ ಹಿನ್ನೆಲೆಯಲ್ಲಿ ಕಲುಷಿತ ನೀರು ಪೂರೈಕೆ ಸಾಮಾನ್ಯ. ಆದರೆ ಇದನ್ನು‌ ಮೆಟ್ಟಿ ನಿಂತು ಪ್ರತಿ ಹಳ್ಳಿ, ಪಟ್ಟಣದ ಸಾರ್ವಜನಿಕರಿಗೆ ಶುದ್ಧೀಕರಿಸಿದ ಕುಡಿಯುವ ನೀರು ಪೂರೈಸುವುದು ನಮ್ಮ‌ ಜವಾಬ್ದಾರಿ. ಅಧಿಕಾರಿಗಳು ಈ ಬಗ್ಗೆ ಕಾಳಜಿ ವಹಿಸದಿದ್ದರೆ ಶಿಸ್ತು ಕ್ರಮ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಸರಕಾರದ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್, ಕಂದಾಯ ಇಲಾಖೆಯ ಆಯುಕ್ತ ಪಿ. ಸುನೀಲ್ ಕುಮಾರ್‌ ಸಹಿತ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X