Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಮೂಲ ಕೃತಿಯ ಆಶಯ ಉಳಿಯಲು...

Afzalpur | ಮೂಲ ಕೃತಿಯ ಆಶಯ ಉಳಿಯಲು ಭಾಷಾಂತರಕಾರನಿಗೆ ಎರಡೂ ಭಾಷೆಗಳ ಜ್ಞಾನ ಅಗತ್ಯ: ಡಾ. ಸೂರ್ಯಕಾಂತ ಸುಜ್ಯಾತ್

ವಾರ್ತಾಭಾರತಿವಾರ್ತಾಭಾರತಿ12 Aug 2026 4:55 PM IST
share
Afzalpur | ಮೂಲ ಕೃತಿಯ ಆಶಯ ಉಳಿಯಲು ಭಾಷಾಂತರಕಾರನಿಗೆ ಎರಡೂ ಭಾಷೆಗಳ ಜ್ಞಾನ ಅಗತ್ಯ: ಡಾ. ಸೂರ್ಯಕಾಂತ ಸುಜ್ಯಾತ್

ಅಫಜಲಪುರ: ಯಾವುದೇ ಭಾಷೆಯ ಸಾಹಿತ್ಯ ಕೃತಿಯು ಜಾಗತಿಕ ಮಟ್ಟದಲ್ಲಿ ಪರಿಚಯವಾಗಲು ಭಾಷಾಂತರ ಅತ್ಯವಶ್ಯಕ. ಮೂಲ ಕೃತಿಯನ್ನು ಭಾಷಾಂತರಿಸುವ ವ್ಯಕ್ತಿಗೆ ಮೂಲ ಭಾಷೆ ಹಾಗೂ ಭಾಷಾಂತರಿಸುವ ಭಾಷೆಯ ಬಗ್ಗೆ ಸಮಗ್ರ ಜ್ಞಾನವಿರಬೇಕು. ಆಗ ಮಾತ್ರ ಕೃತಿಯ ಮೂಲ ಆಶಯ ಮತ್ತು ಮೌಲ್ಯವನ್ನು ಸಮರ್ಪಕವಾಗಿ ಉಳಿಸಿಕೊಳ್ಳಲು ಸಾಧ್ಯ ಎಂದು ಖ್ಯಾತ ಭಾಷಾಂತರಕಾರ ಡಾ. ಸೂರ್ಯಕಾಂತ ಸುಜ್ಯಾತ್ ಹೇಳಿದರು.

ಪಟ್ಟಣದ ಮದರ್ ತೆರೆಸಾ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ‘ದೇಗುಲಗಳ ಧರ್ಮ ಹಾಗೂ ಧರ್ಮದ ದೇಗುಲಗಳು’ ಕೃತಿ ಕುರಿತು ಆಯೋಜಿಸಿದ್ದ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮರಾಠಿ ಮೂಲದ ಈ ಕೃತಿ ಸಮಾಜದ ಜಾಗೃತಿಗೆ ಪೂರಕವಾಗಿದೆ. ಖ್ಯಾತ ಚಿಂತಕ ಪ್ರಬೋಧನಕರ ಠಾಕ್ರೆ ಅವರ ಕೃತಿಯನ್ನು ಕನ್ನಡಕ್ಕೆ ಭಾಷಾಂತರಿಸಲಾಗಿದ್ದು, ವಿದ್ಯಾರ್ಥಿಗಳು ಅದರ ಮೂಲ ಆಶಯವನ್ನು ಅರಿತುಕೊಳ್ಳಬೇಕು ಎಂದರು.

ವೀರೇಂದ್ರ ಪಾಟೀಲ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಕೆ. ನಾರಾಯಣ ಮಾತನಾಡಿ, ದೇಗುಲಗಳಿಗೆ ಅನ್ನ ನೀಡುವುದಕ್ಕಿಂತ ಹಸಿದವರಿಗೆ ಅನ್ನ ನೀಡಿದಾಗ ನಿಜವಾದ ದೈವತ್ವವನ್ನು ಕಾಣಬಹುದು. ಪ್ರತಿಯೊಬ್ಬರೂ ಮಾನವೀಯತೆಯನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.

ನಿವೃತ್ತ ಪ್ರಾಧ್ಯಾಪಕ ನಾಮದೇವ ಕಡಕೋಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತರಾಗದೆ ಸಾಹಿತ್ಯ ಲೋಕದ ಮಹತ್ವವನ್ನು ಅರಿತುಕೊಳ್ಳಬೇಕು. ನಾಡಿನ ಪ್ರಸಿದ್ಧ ಲೇಖಕರ ಕೃತಿಗಳ ಕುರಿತು ಆಯೋಜಿಸುವ ಸಂವಾದ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸಾಹಿತಿ ಡಿ.ಎಂ. ನದಾಫ ಅವರು ‘ದೇಗುಲಗಳ ಧರ್ಮ ಹಾಗೂ ಧರ್ಮದ ದೇಗುಲಗಳು’ ಕೃತಿ ಕುರಿತು ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು.

ಚಿಂತಕ ಡಾ. ಸಂಗಣ್ಣ ಸಿಂಗೆ ಮಾತನಾಡಿ, ಪುಸ್ತಕಗಳು ವಿದ್ಯಾರ್ಥಿಗಳ ಜೀವನವನ್ನು ರೂಪಿಸುವ ಪ್ರಮುಖ ಸಾಧನಗಳಾಗಿವೆ. ವಿದ್ಯಾರ್ಥಿಗಳು ಮೌಲಿಕ ಕೃತಿಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳುವುದರ ಜೊತೆಗೆ ವೈಜ್ಞಾನಿಕವಾಗಿ ಆಲೋಚಿಸುವ ಶಕ್ತಿಯನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಲೀಂ ಶೇಖ ವಹಿಸಿದ್ದರು. ಪಂಕಜ ನಾಯೋಡಿ ಸ್ವಾಗತಿಸಿದರು. ಶಿವಲೀಲಾ ಪಾಟೀಲ ನಿರೂಪಿಸಿದರು. ಸುಮೀತ್ ಶಿಂಧೆ ವಂದಿಸಿದರು.

ಉಪನ್ಯಾಸಕ ಶಿವಾನಂದ ಮುಗಳಿ, ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದು, ಸಂವಾದದಲ್ಲಿ ಭಾಗವಹಿಸಿದರು.

Tags

KnowledgeAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X