ಅಫಜಲಪುರ | ಚಂದ್ರಶೇಖರ ಕರಜಗಿಗೆ ʼಅಫಜಲ್ ಸೇವಾ ಪ್ರಶಸ್ತಿʼ ಪ್ರದಾನ

ಅಫಜಲಪುರ: ಅಫಜಲ್ ಖಾನ್ ಟ್ರಸ್ಟ್ ವತಿಯಿಂದ ಕೊಡಮಾಡುವ ಅಫಜಲ್ ಸೇವಾ ಪ್ರಶಸ್ತಿಯನ್ನು ಸಮಾಜಸೇವಕ ಚಂದ್ರಶೇಖರ ಕರಜಗಿ ಅವರಿಗೆ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಮಕ್ಸೂದ್ ಜಾಗಿರದಾರ್ ಅವರು, 2019ರಲ್ಲಿ ಅಫಜಲ್ ಖಾನ್ ಟ್ರಸ್ಟ್ ನೋಂದಣಿ ಮಾಡಿಸಿ ಇಲ್ಲಿವರೆಗೂ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಸುಮಾರು 20ಕ್ಕೂ ಹೆಚ್ಚು ಜನರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ ಎಂದು ಹೇಳಿದರು.
ಇತ್ತೀಚಿಗೆ ನಡೆದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಅಫಜಲ್ ಖಾನ್ ಟ್ರಸ್ಟ್ ವತಿಯಿಂದ 2026ನೇ ಸಾಲಿನ ಮೊದಲ ಸಾಧಕ ಎಂದು ಗುರುತಿಸಿ ಇವರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕರಜಗಿ ಅವರು ಉತ್ತಮ ಸಮಾಜ ಸೇವೆ ಮಾಡುತ್ತಾ ಬಂದಿರುವುದು ಮಳೇಂದ್ರ ಶಿವಾಚಾರ್ಯರ ಮಠಕ್ಕೂ ಕೀರ್ತಿ ತಂದಿದ್ದಾರೆ. ಇವರ ಸಾಮಾಜಿಕ ಸೇವೆ ನಿಜಕ್ಕೂ ಶ್ಲಾಘನೀಯವಾಗಿದೆ ಎಂದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಮುರುಘೇಂದ್ರ ಮಸಳಿ, ಬಾಬುಮೀಯಾ ಫುಲಾರಿ, ಚನ್ನು ಮನಿಯಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.





