Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ | ಕಬ್ಬು ಕಟಾವು ಹೆಸರಿನಲ್ಲಿ...

ಅಫಜಲಪುರ | ಕಬ್ಬು ಕಟಾವು ಹೆಸರಿನಲ್ಲಿ ರೈತರಿಗೆ ವಂಚನೆ ಆರೋಪ : ರೇಣುಕಾ ಸಕ್ಕರೆ ಕಾರ್ಖಾನೆ ಎದುರು ರೈತರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Jan 2026 8:08 PM IST
share
ಅಫಜಲಪುರ | ಕಬ್ಬು ಕಟಾವು ಹೆಸರಿನಲ್ಲಿ ರೈತರಿಗೆ ವಂಚನೆ ಆರೋಪ :  ರೇಣುಕಾ ಸಕ್ಕರೆ ಕಾರ್ಖಾನೆ ಎದುರು ರೈತರ ಪ್ರತಿಭಟನೆ

ಅಫಜಲಪುರ : ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವು ಹೆಸರಿನಲ್ಲಿ ರೈತರನ್ನು ವ್ಯವಸ್ಥಿತವಾಗಿ ವಂಚಿಸುತ್ತಿವೆ ಎಂದು ಆರೋಪಿಸಿ, ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘಗಳ ನೇತೃತ್ವದಲ್ಲಿ ಗುರುವಾರ ತಾಲೂಕಿನ ಹವಳಗಾ ರೇಣುಕಾ ಸಕ್ಕರೆ ಕಾರ್ಖಾನೆ ಎದುರು ರೈತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಪರ ಹೋರಾಟಗಾರರಾದ ಶ್ರೀಮಂತ ಬಿರಾದಾರ, ಗುರು ಚಾಂದಕವಟೆ ಮತ್ತು ರಮೇಶ್ ಪಾಟೀಲ ಅವರು, ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡದೆ ರೈತರನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳುತ್ತಿರುವ ಸಕ್ಕರೆ ಕಾರ್ಖಾನೆಗಳು, ಇದೀಗ ಕಬ್ಬು ಕಟಾವು ಗ್ಯಾಂಗ್‌ಗಳ ಮೂಲಕ ಅಕ್ರಮ ಹಣ ವಸೂಲಿಗೆ ಇಳಿದಿರುವುದು ಅಸಹ್ಯಕರ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಸ್ತುತ ಎಕರೆಗೆ ರೂ.5,000 ರಿಂದ ರೂ.10,000 ವರೆಗೆ ಹಣ ವಸೂಲಿಗೆ ಇಳಿದಿದ್ದಾರೆ ಇದು ರೈತರ ಮೇಲೆ ಶೋಷಣೆ ಆಗುತ್ತಿದೆ ಎಂದು ಆರೋಪಿಸಿದರು.

ಒಂದು ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ವಿಭಾಗ, ಸಾಗಾಣಿಕೆ ಹಾಗೂ ಕಟಾವು ವಿಭಾಗಗಳಲ್ಲಿ 70ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರೂ, ಕಬ್ಬು ನಾಟಿಯಿಂದ ಸರ್ವೆ ಹಾಗೂ ಅಂತಿಮ ಕಟಾವುವರೆಗೆ ಜವಾಬ್ದಾರಿ ಹೊಂದಿರುವ ಈ ವಿಭಾಗಗಳು ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಲು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರು 12 ತಿಂಗಳು ಪೂರ್ತಿಯಾಗುವ ಮೊದಲು ಕಬ್ಬು ಕಟಾವು ಮಾಡಬಾರದು. ಅದಕ್ಕಿಂತ ಮುಂಚಿತವಾಗಿ ಕಟಾವು ಮಾಡಿದರೆ ಇಳುವರಿ ಕುಂಠಿತವಾಗುತ್ತದೆ. ಈ ಕುರಿತು ರೈತರು ಪರಸ್ಪರ ಸಹಕಾರದಿಂದ ನಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಒಂದು ಕಡೆ ಕಬ್ಬಿಗೆ ಸಮರ್ಪಕ ಬೆಂಬಲ ಬೆಲೆ ಇಲ್ಲದೆ ರೈತರು ಸಂಕಷ್ಟ ಅನುಭವಿಸುತ್ತಿದ್ದರೆ, ಮತ್ತೊಂದು ಕಡೆ ಔಷಧಿ ಹಾಗೂ ಗೊಬ್ಬರದ ಬೆಲೆ ಏರಿಕೆಯಿಂದ ಕೃಷಿ ವೆಚ್ಚ ದುಬಾರಿಯಾಗಿದೆ. ಇಂತಹ ಸಂದರ್ಭದಲ್ಲಿ ಕಾರ್ಖಾನೆ ಸಿಬ್ಬಂದಿಯ ವರ್ತನೆ ‘ಗಾಯದ ಮೇಲೆ ಬರೆ ಎಳೆದಂತೆ’ ರೈತರ ಮೇಲೆ ಮತ್ತಷ್ಟು ಹೊರೆ ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಹಿರಿಯತನದ ಆಧಾರದ ಮೇಲೆ ಕಬ್ಬು ಕಟಾವು ನಡೆಯದೆ ಇರುವುದರಿಂದ ಇಳುವರಿ ಕುಸಿಯುವ ಭೀತಿ ಹೆಚ್ಚಿದ್ದು, 12 ತಿಂಗಳೊಳಗೆ ಕಟಾವು ಆಗದಿದ್ದರೆ ಉತ್ಪಾದನೆಗೆ ಭಾರೀ ಹಾನಿಯಾಗಲಿದೆ. ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಜಿಲ್ಲಾಡಳಿತ ತಕ್ಷಣ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆ ವೇಳೆ ರೇಣುಕಾ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ರೈತರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಬ್ಬು ಅಭಿವೃದ್ಧಿ ಮಂಡಳಿ ಅಧಿಕಾರಿ ಚಿದಾನಂದ ಹಿರೇಮಠ ಮಾತನಾಡಿ, ತಕ್ಷಣ ಸಭೆ ಕರೆದು ಅಕ್ರಮ ಹಣ ವಸೂಲಿಯನ್ನು ತಡೆಯಲಾಗುವುದು ಹಾಗೂ ಹಿರಿಯತನದ ಆಧಾರದ ಮೇಲೆ ಕಬ್ಬು ಕಟಾವು ನಡೆಸಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಯಲ್ಲಪ್ಪ ಮ್ಯಾಕೇರಿ, ಬಸವರಾಜ ಪಾಟೀಲ, ಜಗಲೆಪ್ಪ ಪೂಜಾರಿ, ಸಂತೋಷ ಮಾಲಿಪಾಟೀಲ, ಸಂಗಣ್ಣ ನಾರಶೇರ, ಬಸವರಾಜ ಗಾಣೂರ, ರಾಜುಗೌಡ ಬಿರಾದಾರ, ಅರ್ಜುನ ಕುಂಬಾರ, ಭೀಮನಗೌಡ, ಪುಂಡಲಿಕ ಸೋಲಾಪೂರ, ಸುರೇಶ್ ಪಾಟೀಲ, ಕಾಮಣ್ಣ ಹೂಗಾರ, ಕಾಮಣ್ಣಗೌಡ ಪಾಟೀಲ ಸೇರಿದಂತೆ ಅನೇಕ ರೈತರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X